NTA Releases JEE Main 2021 Session 4 Admit Card: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA), ಜೆಇಇ ಮುಖ್ಯ ಪರೀಕ್ಷೆಯ ಅಂತಿಮ ಸೆಷನ್ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಇದನ್ನು ಅಧಿಕೃತ ವೆಬ್‌ಸೈಟ್‌ನಿಂದ ಸುಲಭವಾಗಿ ಡೌನ್‌ಲೋಡ್ ಮಾಡಬಹುದು. ಅಧಿಕೃತ ವೆಬ್‌ಸೈಟ್ jeemain.nta.nic.in ಗೆ ಭೇಟಿ ನೀಡುವ ಮೂಲಕ ಕೆಲವು ಸುಲಭ ಹಂತಗಳನ್ನು ಅನುಸರಿಸುವ ಮೂಲಕ ಪ್ರವೇಶ ಪತ್ರವನ್ನು (JEE ಮುಖ್ಯ 2021 ಪ್ರವೇಶ ಪತ್ರ) ಡೌನ್‌ಲೋಡ್ ಮಾಡಬಹುದು.
ಐಐಟಿ ಜೆಇಇ ಅಂದರೆ ಜೆಇಇ ಮುಖ್ಯ ಮತ್ತು ಜೆಇಇ ಅಡ್ವಾನ್ಸ್ಡ್ ಪರೀಕ್ಷೆಗಳಿಗೆ ಹಾಜರಾಗಲು, ವಿದ್ಯಾರ್ಥಿಗಳು ಮುಂಚಿತವಾಗಿಯೇ ತಯಾರಿ ಆರಂಭಿಸುತ್ತಾರೆ. ಜೆಇಇ ಪರೀಕ್ಷೆಯು ವಿದ್ಯಾರ್ಥಿಯ ಮೂಲಭೂತ ಅಂಶಗಳನ್ನು ಪರಿಶೀಲಿಸುತ್ತದೆ. ಶಿಕ್ಷಣ ಸಚಿವಾಲಯದ ಪ್ರಕಾರ, ಕೊರೊನಾ ವೈರಸ್‌ನಿಂದಾಗಿ, ಈ ಬಾರಿ ಈ ಪರೀಕ್ಷೆಯನ್ನು 334 ನಗರಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೊದಲು ಈ ಪರೀಕ್ಷೆಯನ್ನು 232 ನಗರಗಳಲ್ಲಿ ನಡೆಸಬೇಕಿತ್ತು. ಆದರೆ ಕೊರೊನಾ ಯುಗದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.
ಇದನ್ನೂ ಓದಿ-ನಾಳೆ ಶಾಲೆಗಳು ಪುನರಾರಂಭ ಪೋಷಕರಲ್ಲಿ ಮನವಿ ಮಾಡಿಕೊಂಡ ಸಿಎಂ ಬೊಮ್ಮಾಯಿ
ಈ ಸುಲಭ ವಿಧಾನದ ಮೂಲಕ ನೀವು ನಿಮ್ಮ ಅಡ್ಮಿಟ್ ಕಾರ್ಡ್ ಡೌನ್ಲೋಡ್ ಮಾಡಬಹುದು
ಜೆಇಇ ಮುಖ್ಯ ಮತ್ತು ಜೆಇಇ ಅಡ್ವಾನ್ಸ್ಡ್ ಎರಡನ್ನೂ ಕಂಪ್ಯೂಟರ್ ಆಧಾರಿತ ಟೆಸ್ಟ್ ಮೂಲಕ ನಡೆಸಲಾಗುತ್ತದೆ. ಆ ಕೆಳಗೆ ಸೂಚಿಸಲಾಗಿರುವ ವಿಧಾನವನ್ನು ಅನುಸರಿಸುವ ಮೂಲಕ ಪರೀಕ್ಷೆಯ ಪ್ರವೇಶ ಪತ್ರವನ್ನು ನೀವು ಸುಲಭವಾಗಿ ಡೌನ್‌ಲೋಡ್ ಮಾಡಬಹುದು. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು, ಮೊದಲು ಅಧಿಕೃತ ವೆಬ್‌ಸೈಟ್ jeemain.nta.nic.in ಗೆ ಭೇಟಿ ನೀಡಬೇಕು. ಅದರ ನಂತರ ವೆಬ್‌ಸೈಟ್‌ನಲ್ಲಿ ನೀಡಿರುವ ಅಡ್ಮಿಟ್ ಕಾರ್ಡ್ ಲಿಂಕ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಅಲ್ಲಿ ನಮೂದಿಸಿದ ನಂತರ, ವಿದ್ಯಾರ್ಥಿಯು ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಬಹುದು.
ಇದನ್ನೂ ಓದಿ-ಒಂದು ತಿಂಗಳ ನಂತರ ಕಡಿಮೆಯಾದ ಪೆಟ್ರೋಲ್ ದರ, ಡೀಸೆಲ್ ಬೆಲೆಯೂ ಇಳಿಕೆ!
ಮೊಟ್ಟಮೊದಲಬಾರಿಗೆ 13 ಭಾಷೆಗಳಲ್ಲಿ ಪರೀಕ್ಷೆ
ಈ ವರ್ಷ ಜೆಇಇ ಮುಖ್ಯ ಪರೀಕ್ಷೆಯನ್ನು (JEE Main 2021 Final Exam) ಒಟ್ಟು ನಾಲ್ಕು ಹಂತಗಳಲ್ಲಿ ನಡೆಸಲಾಗುತ್ತಿದೆ. ಮೂರು ಹಂತಗಳ ಪರೀಕ್ಷೆಯನ್ನು ಈಗಾಗಲೇ ನಡೆಸಲಾಗಿದೆ. ನಾಲ್ಕನೇ ಮತ್ತು ಕೊನೆಯ ಹಂತದ ಪರೀಕ್ಷೆಯು ಆಗಸ್ಟ್ 26 ರಿಂದ ಪ್ರಾರಂಭವಾಗಲಿದೆ. ಈ ಪರೀಕ್ಷೆಯನ್ನು 26, 27, 31 ಆಗಸ್ಟ್, 1 ಮತ್ತು 2 ಸೆಪ್ಟೆಂಬರ್, 2021 ರಂದು ನಡೆಸಲಾಗುತ್ತಿದೆ. ಈ ಬಾರಿ ಒಟ್ಟು 13 ವಿವಿಧ ಭಾಷೆಗಳಲ್ಲಿ ಜೆಇಇ ಮುಖ್ಯ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದೆ. ಜೆಇಇ ಮುಖ್ಯ ಪರೀಕ್ಷೆಗಳನ್ನು 13 ವಿವಿಧ ಭಾಷೆಗಳಲ್ಲಿ ನಡೆಸುವುದು ಇದೇ ಮೊದಲು. ಈ ಭಾಷೆಗಳಲ್ಲಿ ಹಿಂದಿ, ಇಂಗ್ಲಿಷ್ ಮತ್ತು ಪ್ರಾದೇಶಿಕ ಭಾಷೆಗಳು ಸೇರಿವೆ. ಪಂಜಾಬಿ, ತಮಿಳು, ತೆಲುಗು ಹೊರತುಪಡಿಸಿ, ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಅಸ್ಸಾಮಿ, ಬಂಗಾಳಿ, ಕನ್ನಡ, ಮಲಯಾಳಂ, ಮರಾಠಿ, ಒರಿಯಾ ಮತ್ತು ಉರ್ದು ಭಾಷೆಗಳು ಶಾಮೀಲಾಗಿವೆ.
ಇದನ್ನೂ ಓದಿ-Afghanistan:ಮೊದಲ ತಾಲಿಬಾನಿ ಫತ್ವಾ ಜಾರಿ, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಒಟ್ಟಿಗೆ ಓದುವಂತಿಲ್ಲ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ