ನವದೆಹಲಿ: 2021ರ ಶೈಕ್ಷಣಿಕ ವರ್ಷದಲ್ಲಿ ನ್ಯಾಷನಲ್ ಟೆಸ್ಟಿಂಗ್ ಏಜನ್ಸಿ JEE-MAIN ಹಾಗೂ NEET-2021 ಪರೀಕ್ಷೆಗಳ ಪಠ್ಯಕ್ರಮ ಬದಲಾಯಿಸುವ ಸಾಧ್ಯತೆ ಇದೆ. ಬದಲಾದ ಪಠ್ಯಕ್ರಮ ಮುಂದಿನ ಕೆಲ ದಿನಗಳಲ್ಲಿ ಜಾರಿಗೆ ಬರುವ ಸಾಧ್ಯತೆಯೂ ಕೂಡ ಇದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖರಿಯಾಲ್ ನಿಶಂಕ್ ಅವರು NTAಗೆ ಈ ವರ್ಷ ನಡೆಸಲಾಗುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ನೂತನ ಪಠ್ಯಕ್ರಮ ಜಾರಿಗೊಳಿಸಲು ಸೂಚಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನು ಓದಿ- NEET, JEE ಮುಂದೂಡಿಕೆ ವಿಚಾರ: ಮರುಪರಿಶೀಲನಾ ಅರ್ಜಿ ತಿರಸ್ಕರಿಸಿದ ಸುಪ್ರೀಂ


ನ್ಯಾಷನಲ್ ಟೆಸ್ಟಿಂಗ್ ಏಜನ್ಸಿ ಪ್ರತಿ ವರ್ಷ JEE Main, NEET [UG], CMAT, GPAT, UGC NET ಗಳಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಯೋಜಿಸುತ್ತದೆ ಎಂಬುದು ಇಲ್ಲಿ ಗಮನಾರ್ಹ. ಕೆಲ ದಿನಗಳ ಹಿಂದೆಯಷ್ಟೇ ಕೇಂದ್ರ ಶಿಕ್ಷಣ ಸಚಿವ ರಮೇಶ ಪೋಖರಿಯಾಲ್ ನಿಶಂಕ್ ಹಿರಿಯ ಅಧಿಕಾರಿಗೊಂದಿಗೆ ನಡೆಸಿರುವ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದರು. NTA ದೇಶದ ವಿವಿಧ ಶಾಲಾ ಬೋರ್ಡ್ ಗೆ ಸಂಬಂಧಿಸಿದ ತಾಜಾ ಪರಿಸ್ಥಿತಿಯನ್ನು ಗಮನಿಸಿ ಸ್ಪರ್ಧಾತ್ಮಕ ಪರೀಕ್ಷೆಗಳ  ಪಠ್ಯಕ್ರಮ ಜಾರಿಗೊಳಿಸಬೇಕು ಎಂದು ಈ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.


ಇದನ್ನು ಓದಿ- NEET 2020: ಒಂದು ಪರೀಕ್ಷಾ ಕೊಠಡಿಯಲ್ಲಿ ಕೇವಲ 12 ಪರೀಕ್ಷಾರ್ಥಿಗಳಿಗಷ್ಟೇ ಕೂರಲು ವ್ಯವಸ್ಥೆ


ಎಲ್ಲಾ ವಿದ್ಯಾರ್ಥಿವೇತನಗಳು, ಫೆಲೋಶಿಪ್ ಇತ್ಯಾದಿಗಳನ್ನು ಸಕಾಲಿಕವಾಗಿ ತಲುಪಿಸುವಂತೆ ವಿಶ್ವವಿದ್ಯಾಲಯದ ಅನುದಾನ ಆಯೋಗಕ್ಕೆ ಸೂಚನೆ ನೀಡಲಾಗಿದೆ.  ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ತಕ್ಷಣವೇ ಸಹಾಯವಾಣಿ ಪ್ರಾರಂಭಿಸಬೇಕು ಎಂದು ಅಧಿಕಾರಿ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.


ಇದನ್ನು ಓದಿ- ಮೆಡಿಕಲ್-ಎಂಜಿನಿಯರಿಂಗ್‌ಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ


ಕಳೆದ ತಿಂಗಳು ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲದೆ ಇತರೆ 9 ಪ್ರಾದೇಶಿಕ ಭಾಷೆಗಳಲ್ಲಿ ಜೆಇಇ ಮುಖ್ಯ ಪರೀಕ್ಷೆಯನ್ನು ನಡೆಸಲು ಎನ್‌ಟಿಎ ಘೋಷಿಸಿದೆ. ಆದರೆ ಪ್ರಾದೇಶಿಕ ಭಾಷೆಗಳಲ್ಲಿ JEE Main Advance ಪರೀಕ್ಷೆಯನ್ನು ಸಹ ನಡೆಸಬೇಕೆ ಅಥವಾ ಬೇಡವೇ ಎಂಬುದರ ತೀರ್ಮಾನ NTA ಇದುವರೆಗೆ ತೆಗೆದುಕೊಂಡಿಲ್ಲ.


ಇದನ್ನು ಓದಿ- ವರ್ಷದಲ್ಲಿ ಎರಡು ಬಾರಿ ಜೆಇಇ, ಎನ್ಇಇಟಿ ಪರೀಕ್ಷೆ: ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್


ಈ ಬಾರಿ ಫೆಬ್ರುವರಿಯಲ್ಲಿ JEE Main 2021 ಪರೀಕ್ಷೆ ನಡೆಯುವ ಸಾಧ್ಯತೆ
ದೇಶದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸಲಾಗುವ ಜೆಇಇ ಮುಖ್ಯ ಪರೀಕ್ಷೆಯನ್ನು  ಜನವರಿಯ ಬದಲು ಫೆಬ್ರವರಿಯಲ್ಲಿ ನಡೆಸುವ ಸಾಧ್ಯತೆ ಇದೆ. ಅಧಿಕಾರಿಗಳು ಇದನ್ನು ಕೆಲವು ದಿನಗಳ ಹಿಂದೆ ಹೇಳಿದ್ದರು. ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮತ್ತು ನಡೆಯುತ್ತಿರುವ ಪ್ರವೇಶ ಪ್ರಕ್ರಿಯೆಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದ್ದರಿಂದ, ಈ ಬಾರಿ ಫೆಬ್ರವರಿಯಲ್ಲಿ ಜೆಇಇ ಮುಖ್ಯ ಪರೀಕ್ಷೆಯನ್ನು ನಡೆಸುವ ಬಗ್ಗೆ ಚರ್ಚೆ ನಡೆಯುತ್ತಿದೆ.