Rhia Kumari shot dead: ಜಾರ್ಖಂಡ್‌ನ ನಟಿ ರಿಯಾ ಕುಮಾರಿ ಎಂಬಾಕೆಯನ್ನು ರಾಂಚಿ ಕೊಲ್ಕತ್ತಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಮೂವತ್ತು ವರ್ಷ ವಯಸ್ಸಿನ ರಿಯಾ ಹತ್ಯೆ ಬುಧವಾರ ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಹೌರಾ ಜಿಲ್ಲೆಯ ಮಹೀಶ್‌ರೇಖಾ ಸೇತುವೆ ಬಳಿ ನಡೆದಿದೆ ಎಂದು ತಿಳಿದುಬಂದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: OMG: ಕೇವಲ 8 ತಿಂಗಳಲ್ಲಿ 46KG ತೂಕ ಇಳಿಸಿಕೊಂಡ ಪೊಲೀಸ್ ಅಧಿಕಾರಿ!


ರಿಯಾ ಕುಮಾರಿ ಅವರು ತಮ್ಮ ಮೂರು ವರ್ಷದ ಮಗಳು ಹಾಗೂ ಗಂಡ ಪ್ರಕಾಶ್ ಕುಮಾರ್ ಅವರೊಡನೆ ರಾಂಚಿಯಿಂದ ಕೊಲ್ಕತ್ತಾಗೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.


“ಮಹೀಶ್‌ರೇಖಾ ಸೇತುವೆ ಬಳಿ ಮೂತ್ರ ವಿಸರ್ಜನೆಗೆಂದು ಕಾರು ನಿಲ್ಲಿಸಿದ್ದ ಸಂದರ್ಭದಲ್ಲಿ ಮೂವರು ದುಷ್ಕರ್ಮಿಗಳು ಆಗಮಿಸಿ ದರೋಡೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ವಿರೋಧಿಸಿದ ರಿಯಾ ಮೇಲೆ ಅತ್ಯಂತ ಸನಿಹದಿಂದ ಗುಂಡು ಹಾರಿಸಿದ್ದಾರೆ. ರಕ್ತದ ಮಡುವಿನಲ್ಲಿದ್ದ ರಿಯಾಳನ್ನು ತಕ್ಷಣವೇಢ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ ಸಹ ಮಾರ್ಗ ಮಧ್ಯೆ ಆಕೆ ಮೃತಪಟ್ಟಳು” ಎಂದು ರಿಯಾಳ ಗಂಡ ಪ್ರಕಾಶ್ ಕುಮಾರ್ ಹೇಳಿಕೆ ನೀಡಿದ್ದಾರೆ.


ಆದರೆ ಈ ಘಟನೆ ಬಗ್ಗೆ ಪ್ರಕಾಶ್ ಕುಮಾರ್ ಮೇಲೂ ಹೌರಾ ಪೊಲೀಸರಿಗೆ ಅನುಮಾನ ಬಂದಿದ್ದು, ಪ್ರಕಾಶ್ ಹೇಳಿಕೆಗಳು ಅನುಮಾನಾಸ್ಪದವಾಗಿವೆ ಎಂದಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ಚಂದ್ರಬಾಬು ನಾಯ್ಡು ರೋಡ್‌ಶೋನಲ್ಲಿ ಭೀಕರ ಕಾಲ್ತುಳಿತ: 8 ಮಂದಿ ಸಾವು, ಹಲವರ ಸ್ಥಿತಿ ಗಂಭೀರ!


ರಿಯಾ ಕುಮಾರಿ ಜಾರ್ಖಂಡ್‌ನ ಕೆಲ ಧಾರಾವಾಹಿಗಳಲ್ಲಿ ನಟಿಸಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.