ರಾಂಚಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಕುಮಾರ್ ರಾಜೀನಾಮೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಸಂಪೂರ್ಣ ಹೊಣೆ ಹೊತ್ತು ಅಜಯ್ ಕುಮಾರ್ ಅವರು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ರಾಜೀನಾಮೇ ನೀಡಿದ್ದಾರೆ. ಆದರೆ ಪಕ್ಷ ಅವರ ರಾಜೀನಾಮೆಯನ್ನು ಇನ್ನೂ ಅಂಗೀಕರಿಸಿಲ್ಲ.


ಜಾರ್ಖಂಡ್ ನ 14 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ ಮತ್ತೂ ಜಾರ್ಖಂಡ್ ವಿದ್ಯಾರ್ಥಿಗಳ ಸಂಘಟನೆ 12 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಉಳಿದಂತೆ ಕಾಂಗ್ರೆಸ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ತಲಾ ಒಂದು ಸ್ಥಾನ ಪಡೆದಿವೆ.


ಮತ್ತೊಂದೆಡೆ ಲೋಕಸಭೆಯ 542 ಸ್ಥಾನಗಳಲ್ಲಿ ಕೇವಲ 52 ಸ್ಥಾನಗಳನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ. ಹೀಗಾಗಿ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಜವಾಬ್ದಾರಿ ಹೊತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಹ ರಾಜೀನಾಮೆ ನೀಡುವ ಪ್ರಸ್ತಾಪ ಮಾಡಿದ್ದರು. ಆದರೆ ಶನಿವಾರ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ರಾಜೀನಾಮೆ ಪ್ರಸ್ತಾಪವನ್ನು ತಿರಸ್ಕರಿಸಲಾಯಿತು ಎಂದು ಮೂಲಗಳು ತಿಳಿಸಿವೆ.