ಲಾಲೂ ಪೆರೋಲ್ ಮುಂದುವರಿಕೆಗೆ ಜಾರ್ಖಂಡ್ ಹೈಕೋರ್ಟ್ ನಕಾರ

ಅನಾರೋಗ್ಯದ ಹಿನ್ನೆಲೆಯಲ್ಲಿ ಕೋರ್ಟ್ ಪೆರೋಲ್ ಮೇಲೆ ಬಿಡುಗಡೆ ಮಾಡಲು ಅನುಮತಿ ನೀಡಿತ್ತು.

Last Updated : Aug 24, 2018, 06:40 PM IST
ಲಾಲೂ ಪೆರೋಲ್ ಮುಂದುವರಿಕೆಗೆ ಜಾರ್ಖಂಡ್ ಹೈಕೋರ್ಟ್ ನಕಾರ title=

ಪಾಟ್ನಾ: ರಾಷ್ಟ್ರೀಯ ಜನತಾ ದಳ(ಆರ್ಜೆಡಿ) ಮುಖ್ಯಸ್ಥ ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರು ಅನಾರೋಗ್ಯದ ಆಧಾರದ ಮೇಲೆ ಪೆರೋಲ್ ಅವಧಿಯನ್ನು 3 ತಿಂಗಳವರೆಗೆ ವಿಸ್ತರಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಜಾರ್ಖಂಡ್ ಹೈಕೋರ್ಟ್ ಆಗಸ್ಟ್ 30ರೊಳಗೆ ಶರಣಾಗುವಂತೆ ಶುಕ್ರವಾರ ಆದೇಶ ನೀಡಿದೆ.

"ಮುಂಬೈನ ಏಶಿಯನ್ ಹಾರ್ಟ್ ಇನ್ಸ್ಟಿಟ್ಯೂಟ್'ನಲ್ಲಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವ ಲಾಲೂ ಅವರು ರಾಂಚಿಯ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಕರೆತರಬೇಕಾಗಿದೆ' ಎಂದು ಲಾಲೂ ಪ್ರಸಾದ್ ಯಾದವ್ ಪರ ವಕೀಲರು ತಿಳಿಸಿದ್ದಾರೆ.

ಮೇವು ಹಗರಣ ಪ್ರಕರಣಗಳ ಆರೋಪದ ಮೇಲೆ ರಾಂಚಿಯ ಬಿರ್ಸಾ ಮುಂಡಾ ಸೆಂಟ್ರಲ್ ಜೈಲಿನಲ್ಲಿ ಲಾಲು ಪ್ರಸಾದ್ ಯಾದವ್ ಜೈಲುವಾಸ ಅನುಭವಿಸುತ್ತಿದ್ದಾರೆ. ಡಿಸೆಂಬರ್ 23, 2017 ರಂದು ಲಾಲುಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಆದರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ಕೋರ್ಟ್ ಪೆರೋಲ್ ಮೇಲೆ ಬಿಡುಗಡೆ ಮಾಡಲು ಅನುಮತಿ ನೀಡಿತ್ತು.

2013 ರಿಂದ ಮೇವು ಹಗರಣದ ನಾಲ್ಕು ಪ್ರಕರಣಗಳಲ್ಲಿ ದೋಷಿ ಎಂದು ಸಾಬಿತಾಗಿರುವ ಲಾಲೂ ಪ್ರಸಾದ್ ಯಾದವ್ ಅವರಿಗೆ, ಇತ್ತೀಚಿನ ದಮ್ಕಾ ಖಜಾನೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ 14 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

Trending News