ನವದೆಹಲಿ: ದಿಯೋಘರ್ ಖಜಾನೆಗೆ ಸಂಬಂಧಿಸಿದ ಮೇವು ಹಗರಣ ಪ್ರಕರಣದಲ್ಲಿ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರದಂದು ಜಾಮೀನು ನೀಡಿದೆ.  



COMMERCIAL BREAK
SCROLL TO CONTINUE READING

ಜೂನ್ 13 ರಂದು ಲಾಲು ಪ್ರಸಾದ್ ಜಾರ್ಖಂಡ್ ಹೈಕೋರ್ಟ್‌ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ವರ್ಷದ ಏಪ್ರಿಲ್‌ನಲ್ಲಿ ಲಾಲು ಪ್ರಸಾದ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಕಳೆದ ವಿಚಾರಣೆಯಲ್ಲಿ, ಲಾಲು ಪ್ರಸಾದ್ ಅವರ ಜಾಮೀನು ಅರ್ಜಿಗೆ ತನ್ನ ಉತ್ತರವನ್ನು ಸಲ್ಲಿಸುವಂತೆ ನ್ಯಾಯಾಲಯವು ಕೇಂದ್ರ ತನಿಖಾ ದಳವನ್ನು (ಸಿಬಿಐ) ಕೇಳಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಲಾಲು ಪ್ರಸಾದ್ ಅವರ ಜಾಮೀನು ಅರ್ಜಿಯನ್ನು ಸಿಬಿಐ ವಿರೋಧಿಸಿದೆ ಎನ್ನಲಾಗಿದೆ. 


ಮೇವು ಹಗರಣ ಪ್ರಕರಣಗಳಲ್ಲಿ ದೋಷಿಯಾಗಿರುವ ಲಾಲು ಪ್ರಸಾದ್ ಅವರಿಗೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಸ್ತುತ ಅವರನ್ನುರಾಂಚಿಯಲ್ಲಿರುವ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ರಿಮ್ಸ್) ನಲ್ಲಿ ದಾಖಲಿಸಲಾಗಗಿದ್ದಾರೆ.