India Pakistan War: ಇಂಡಿಯಾ ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಜಮ್ಮುವಿನ ಗಡಿಜಿಲ್ಲೆಗಳಲ್ಲಿನ ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಈ ಮಧ್ಯೆ ಜೆಕೆ ಸಿಎಂ ಒಮರ್ ಅಬ್ದುಲ್ಲಾ ಅವರ ವಿಡಿಯೋ ವೈರಲ್ ಆಗುತ್ತಿದೆ.

India Pakistan War News: ಮೇ 08, 09ರಿಂದ ಪಾಕಿಸ್ತಾನದ ಅಪ್ರಚೋದಿತ ದಾಳಿಯು ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯನ್ನು ಎಚ್ಚಿಸಿದೆ. ಪಾಕಿಸ್ತಾನದ ಶೆಲ್ ದಾಳಿಯಿಂದಾಗಿ 18 ಜನರು ಮೃತಪಟ್ಟಿದ್ದು, ಹತ್ತಾರು ಜನರಿಗೆ ಗಾಯಗಳಾಗಿವೆ. ಇದರ ಬೆನ್ನಲ್ಲೇ ನಾಗರೀಕರ ಸುರಕ್ಷತೆಯನ್ನು ಮನಗಂಡು ಜಮ್ಮು ಮತ್ತು ಕಾಶ್ಮೀರ ಗಡಿ ಪ್ರದೇಶಗಳಲ್ಲಿನ ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಏತನ್ಮಧ್ಯೆ, ಜಮ್ಮು-ಕಾಶ್ಮೀರ ಮುಖ್ಯಮಂತಿ ಒಮರ್ ಅಬ್ದುಲ್ಲಾ ಬಾಲಕನೊಂದಿಗೆ ಕ್ರಿಕೆಟ್ ಆಡುತ್ತಿರುವ ವಿಡಿಯೋ ಎಲ್ಲರ ಗಮನ ಸೆಳೆಯುತ್ತಿದೆ.
ಭಾರತ ಪಾಕಿಸ್ತಾನದ ನಡುವಿನ ಯುದ್ಧ ಭೀತಿಯ ನಡುವೆ ಜಮ್ಮುವಿನ ಐದು ಜಿಲ್ಲೆಗಳ ಸುಮಾರು 10ಸಾವಿರ ಜನರಿಗೆ ಜಮ್ಮು, ರಾಜೌರಿ ಮತ್ತು ಸಾಂಬಾ ಜಿಲ್ಲೆಗಳ ಪರಿಹಾರ ಶಿಬಿರಗಳಲ್ಲಿ ಆಶ್ರಯವನ್ನು ನೀಡಲಾಗಿದೆ. ನಿನ್ನೆ(ಮೇ 9) ಸಾಂಬಾದಲ್ಲಿ ನಿರ್ಮಿಸಲಾಗಿರುವ ಪರಿಹಾರ ಶಿಬಿರದಲ್ಲಿ ವ್ಯವಸ್ಥೆಗಳನ್ನು ಪರಿಶೀಲಿಸಿದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಬಳಿಕ ಅಲ್ಲಿದ್ದ ಪುಟ್ಟ ಬಾಲಕನೊಂದಿದೆ ಕ್ರಿಕೆಟ್ ಆಡಿದ್ದಾರೆ.
ವಾಸ್ತವವಾಗಿ, ಪಾಕಿಸ್ತಾನದ ಶೆಲ್ ದಾಳಿಯಿಂದ ಹಾನಿಗೊಳಗಾಡ ಸ್ಥಳೀಯರಿಗಾಗಿ ಸ್ಥಾಪಿಸಲಾದ ಶಿಬಿರದಲ್ಲಿ ವ್ಯವಸ್ಥೆಗಳನ್ನು ಪರಿಶೀಲಿಸಿದ ಬಳಿಕ ಅಲ್ಲಿನ ಜನರೊಂದಿಗೆ ಮಾತುಕತೆ ನಡೆಸಿದ ಒಮರ್ ಅಬ್ದುಲ್ಲಾ, ಬಳಿಕ ಅಲ್ಲಿದ್ದ ಬಾಲಕನೊಂದಿಕೆ ಕ್ರಿಕೆಟ್ ಆಡಿ ಗಮನಸೆಳೆದರು. ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ...
#WATCH | Jammu & Kashmir CM Omar Abdullah plays cricket with a young boy at the camp set up for locals affected by Pakistan shelling in Samba pic.twitter.com/L3QuvAFonT
— ANI (@ANI) May 9, 2025
ಜಮ್ಮುವಿನ ಗಡಿ ಜಿಲ್ಲೆಗಳಲ್ಲಿರುವ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಒಮರ್ ಅಬ್ದುಲ್ಲಾ, ಶಿಬಿರಗಳಲ್ಲಿರುವ ನಾಗರೀಕರಿಗೆ ಮೂಲ ಸೌಕರ್ಯಗಳನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಶಿಬಿರದಲ್ಲಿರುವವರಿಗೆ ಇಲ್ಲಿ ಇರುವವರೆಗೂ ದಿನಕ್ಕೆ ಮೂರು ಸಮಯ ಆಹಾರ, ನೈರ್ಮಲ್ಯ ಸೌಲಭ್ಯದ ಜೊತೆಗೆ ವೈದ್ಯಕೀಯ ಸೌಲಭ್ಯವನ್ನೂ ಕಲ್ಪಿಸಲಾಗಿದೆ. ಅಗತ್ಯವಿದ್ದರೆ, ಆಂಬ್ಯುಲೆನ್ಸ್ಗಳ ವ್ಯವಸ್ಥೆಯನ್ನು ಕೊಡೋಯ ಕಲ್ಪಿಸಲಾಗಿದೆ ಎಂದವರು ತಿಳಿಸಿದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ