ಜಮ್ಮು-ಕಾಶ್ಮೀರ್: ಪುಲ್ವಾಮಾದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ

ಭಯೋತ್ಪಾದಕರ ಅಸ್ತಿತ್ವದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ನಂತರ, ಕುಪ್ವಾರಾದ ಹೊಂಡ್ವಾರಾ ತೆಹ್ಸಿಲ್ನ ಬಟುಗುಂಡ್ ಹಳ್ಳಿಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದರು.

Updated: Oct 11, 2018 , 11:43 AM IST
ಜಮ್ಮು-ಕಾಶ್ಮೀರ್: ಪುಲ್ವಾಮಾದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ
Pic: IANS

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುರುವಾರ ನಡೆದ ಶೋಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ (SPO) ಗಾಯಗೊಂಡಿದ್ದಾರೆ. ಗಾಯಗೊಂಡ SPO ಬಿಲಾಲ್ ಅಹ್ಮದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಯೋತ್ಪಾದಕರ ಅಸ್ತಿತ್ವದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ನಂತರ, ಕುಪ್ವಾರಾದ ಹೊಂಡ್ವಾರಾ ತೆಹ್ಸಿಲ್ನ ಬಟುಗುಂಡ್ ಹಳ್ಳಿಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದ ಸಮಯದಲ್ಲಿ ಈ ದಾಳಿ ನಡೆದಿದೆ. ಕಾರ್ಯಾಚರಣೆ ಹಿನ್ನೆಲೆಯಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.