ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಲುರಾ ಪರಿಂಪೋರಾ ಪ್ರದೇಶದಲ್ಲಿ ನಡೆದ ಮುಖಾಮುಖಿಯಲ್ಲಿ ಭದ್ರತಾ ಪಡೆಗಳು ಪಾಕಿಸ್ತಾನದ ಭಯೋತ್ಪಾದಕ ಮತ್ತು ಲಷ್ಕರ್ ಕಮಾಂಡರ್ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿವೆ. ಈ ಎನ್‌ಕೌಂಟರ್‌ನಲ್ಲಿ ಸಹಾಯಕ ಕಮಾಂಡೆಂಟ್, ಸಬ್ ಇನ್ಸ್‌ಪೆಕ್ಟರ್ ಮತ್ತು ಸಿಆರ್‌ಪಿಎಫ್ (CRPF) ಜವಾನ್ ಕೂಡ ಗಾಯಗೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಲಷ್ಕರ್ ಉನ್ನತ ಕಮಾಂಡರ್ ಹತ್ಯೆ:
ಭದ್ರತಾ ಪಡೆಗಳು (Security Forces) ಮನೆಯೊಳಗೆ ಪ್ರವೇಶಿಸಲು ಪ್ರಯತ್ನಿಸಿದಾಗ, ಅಬ್ರಾರ್ ಅವರ ಸಹ ಪಾಕಿಸ್ತಾನದ ಭಯೋತ್ಪಾದಕ ಗುಂಡಿನ ದಾಳಿ ಆರಂಭಿಸಿದ್ದು, ನಂತರ ಪ್ರತೀಕಾರದ ಕ್ರಮ ಕೈಗೊಳ್ಳಲಾಗಿದೆ ಎಂದು ಐಜಿ ವಿಜಯ್ ಕುಮಾರ್ ಹೇಳಿದ್ದಾರೆ. ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಭಯೋತ್ಪಾದಕ ಮತ್ತು ಲಷ್ಕರ್-ಎ-ತೈಬಾ ಕಮಾಂಡರ್ (Top Lashkar-e-Taiba Commander) ಅಬ್ರಾರ್ ಸೇರಿದಂತೆ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದವರು ತಿಳಿಸಿದ್ದಾರೆ.


DRDO Tested Agni Prime Successfully: Agni Prime ಕ್ಷಿಪಣಿಯ ಯಶಸ್ವಿ ಪರೀಕ್ಷೆ, ಮಾರಕ ಕ್ಷಮತೆ 1500KMS


ಭದ್ರತಾ ಪಡೆಗಳು (Security Forces) ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ಇದಲ್ಲದೆ, ಈಗ ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.


ಸೇನೆಯು ನೀಡಿದ ಮಾಹಿತಿಯ ಪ್ರಕಾರ, ಭಯೋತ್ಪಾದಕರೊಂದಿಗೆ ಮುಖಾಮುಖಿ ಇನ್ನೂ ಮುಂದುವರೆದಿದ್ದು ಭದ್ರತಾ ಪಡೆಗಳು ಉಗ್ರರಿಗೆ ಸೂಕ್ತ ಉತ್ತರ ನೀಡುತ್ತಿವೆ. ನಿನ್ನೆ ಸಂಜೆ ಪ್ರಾರಂಭವಾದ ಈ ಕಾರ್ಯಾಚರಣೆಯ ನಂತರ, ಜನ ಸಾಮಾನ್ಯರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ- ಜುಲೈ 15 ರವರೆಗೆ ಲಾಕ್‌ಡೌನ್ ವಿಸ್ತರಿಸಿದ ಪಶ್ಚಿಮ ಬಂಗಾಳ ಸರ್ಕಾರ


3 ಸಿಆರ್‌ಪಿಎಫ್ ಸಿಬ್ಬಂದಿಯ ಹತ್ಯೆಯಲ್ಲಿ ಭಾಗಿ:
ಮೂಲಗಳ ಪ್ರಕಾರ, ಈ ವರ್ಷದ ಆರಂಭದಲ್ಲಿ ಅಬ್ರಾರ್ ಲವೆಪುರದಲ್ಲಿ ಮೂವರು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿಯನ್ನು ಹತ್ಯೆಗೈದ ಭಯೋತ್ಪಾದಕ ಭಾಗಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ, ಭದ್ರತಾ ಪಡೆಗಳು ಇದನ್ನು ಇನ್ನೂ ಖಚಿತಪಡಿಸಿಲ್ಲ. ಅಬ್ರಾರ್‌ನನ್ನು ಕೊಲ್ಲುವುದು ಭದ್ರತಾ ಪಡೆಗಳಿಗೆ ದೊಡ್ಡ ಯಶಸ್ಸು ಮತ್ತು ಆತ ಅನೇಕ ಭಯೋತ್ಪಾದಕ ಘಟನೆಗಳಲ್ಲಿ ಭಾಗಿಯಾಗಿದ್ದ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.