Jammu-Kashmir: ಶೋಪಿಯಾನ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಕಾಶ್ಮೀರ ವಲಯ ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದು, ಶೋಪಿಯಾನ್ ಜಿಲ್ಲೆಯ ಮುನಿಹಾಲ್ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವಿನ ಮುಖಾಮುಖಿಯಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.

Written by - Yashaswini V | Last Updated : Mar 22, 2021, 07:50 AM IST
  • ಮಾರ್ಚ್ 11 ರಿಂದ 5 ಭಯೋತ್ಪಾದಕರ ಹತ್ಯೆ
  • ಈ ಮೊದಲು, ಮಾರ್ಚ್ 13 ರಂದು ಶೋಪಿಯಾನ್‌ನಲ್ಲಿ ಪ್ರಾರಂಭವಾದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳಿಂದ ಉಗ್ರನನ್ನು ಕೊಲ್ಲಲಾಯಿತು
  • ಇದಕ್ಕೂ ಮುನ್ನ ಮಾರ್ಚ್ 11 ರಂದು ಅನಂತ್‌ನಾಗ್‌ನಲ್ಲಿ ನಡೆದ 18 ಗಂಟೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಜೈಶ್ ಭಯೋತ್ಪಾದಕರನ್ನು ಸದೆಬಡಿಯಲಾಯಿತು
Jammu-Kashmir: ಶೋಪಿಯಾನ್‌ನಲ್ಲಿ  ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ title=
Two unidentified terrorists killed in an encounter with security forces in Munihal area of Shopian

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ಉಗ್ರರ ನಡುವಿನ ಮುಖಾಮುಖಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯುವ ಮೂಲಕ ಭದ್ರತಾ ಪಡೆಗಳು ಉತ್ತಮ ಯಶಸ್ಸನ್ನು ಗಳಿಸಿವೆ.

ಈ ಬಗ್ಗೆ ಮಾಹಿತಿ ನೀಡಿರುವ ಕಾಶ್ಮೀರ ವಲಯ ಪೊಲೀಸರು, ಶೋಪಿಯಾನ್ (Shopian) ಜಿಲ್ಲೆಯ ಮುನಿಹಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ - ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರಾತ್ರಿ 2 ಗಂಟೆಗೆ ಕಾರ್ಯಾಚರಣೆ ಪ್ರಾರಂಭ:
ಜಮ್ಮು ಮತ್ತು ಕಾಶ್ಮೀರ (Jammu and Kashmir) ಪೊಲೀಸ್ ಅಧಿಕಾರಿಗಳ ಪ್ರಕಾರ, ರಾತ್ರಿ 2 ಗಂಟೆ ಸುಮಾರಿಗೆ ಶೋಪಿಯಾನ್‌ನ ಮಣಿಹಾಲ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಯಿತು. ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಸೇನೆ ಮತ್ತು ಸಿಆರ್‌ಪಿಎಫ್ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಪ್ರಸ್ತುತ, ಕಾರ್ಯಾಚರಣೆ ನಡೆಯುತ್ತಿದೆ ಮತ್ತು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ - ಈ ಪ್ರಸಿದ್ದ ರಾಜಕಾರಣಿಗೆ ತಮ್ಮ ಮಡದಿಗೆ 'Kiss' ಮಾಡಲೂ ಭಯವಂತೆ, ಕಾರಣ..!

ಮಾರ್ಚ್ 11 ರಿಂದ 5 ಭಯೋತ್ಪಾದಕರು ಕೊಲ್ಲಲ್ಪಟ್ಟರು :
ಮಾರ್ಚ್ 11 ರಿಂದ ಭದ್ರತಾ ಪಡೆಗಳಿಂದ ಈವರೆಗೆ 5 ಭಯೋತ್ಪಾದಕರು ಹತರಾಗಿದ್ದಾರೆ. ಈ ಮೊದಲು, ಮಾರ್ಚ್ 13 ರಂದು ಶೋಪಿಯಾನ್‌ನಲ್ಲಿ ಪ್ರಾರಂಭವಾದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳಿಂದ ಉಗ್ರನನ್ನು ಕೊಲ್ಲಲಾಯಿತು. ಹತ್ಯೆಗೀಡಾದ ಭಯೋತ್ಪಾದಕರಿಂದ ಎಂ -4 ಕಾರ್ಬೈನ್, 36 ಕಾರ್ಟ್ರಿಜ್ಗಳು, 9600 ರೂ. ಮತ್ತು ಕೆಲವು ಆಕ್ಷೇಪಾರ್ಹ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಮಾರ್ಚ್ 11 ರಂದು ಅನಂತ್‌ನಾಗ್‌ನಲ್ಲಿ ನಡೆದ 18 ಗಂಟೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಜೈಶ್ ಭಯೋತ್ಪಾದಕರನ್ನು ಸದೆಬಡಿಯಲಾಗಿದ್ದು, ಎಕೆ 47 ರೈಫಲ್‌ಗಳು, ಪಿಸ್ತೂಲ್‌ಗಳು, ಗ್ರೆನೇಡ್‌ಗಳು ಮತ್ತು ಗುಂಡುಗಳನ್ನು ಭಯೋತ್ಪಾದಕರಿಂದ ವಶಪಡಿಸಿಕೊಳ್ಳಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News