Corona Cases Updates: ಕೋವಿಡ್ ಆರ್ಭಟ ಮತ್ತೆ ಶುರುವಾಗಿದೆ. ಕೊರೊನಾ ಪ್ರಕರಣಗಳ ಹೆಚ್ಚಳದಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಶುಕ್ರವಾರ, ದೇಶಾದ್ಯಂತ 640 ಕೋವಿಡ್ 19 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,997 ಕ್ಕೆ ಏರಿದೆ. ಒಟ್ಟು ಸಾವಿನ ಸಂಖ್ಯೆ 5,33,328 ಆಗಿದೆ. ಇತ್ತೀಚೆಗಷ್ಟೇ ಕೇರಳದಲ್ಲಿ ಒಬ್ಬ ವ್ಯಕ್ತಿ ಕೊರೊನಾದಿಂದ ಸಾವನ್ನಪ್ಪಿದ್ದರು. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: Terror Attack: ಸೇನಾ ವಾಹನದ ಮೇಲೆ ಉಗ್ರರ ದಾಳಿ, ಐವರು ಯೋಧರು ಹುತಾತ್ಮ 


ದೇಶಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ‌ ಸರ್ಕಾರ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಎಲ್ಲಾ ರಾಜ್ಯಗಳಿಗೂ ಎಚ್ಚರಿಕೆ ನೀಡಲಾಗಿದೆ. ಕೊರೊನಾ ವೈರಸ್ ಎದುರಿಸಲು ಸಿದ್ಧರಾಗಿರಲು ಸೂಚಿಸಲಾಗಿದೆ.


ಕೋವಿಡ್-19 ಹೊಸ ರೂಪಾಂತರ JN.1 ವೇಗವಾಗಿ ಹರಡುತ್ತಿದೆ. ದೇಶಾದ್ಯಂತ ರಾಜ್ಯಗಳು ಹೈ ಅಲರ್ಟ್ ಆಗಿವೆ. ಕೇಂದ್ರ ಸರ್ಕಾರವು ಕೋವಿಡ್ ರೋಗಲಕ್ಷಣಗಳನ್ನು ಹೊಂದಿರುವ ಜನರು ಜಾಗರೂಕರಾಗಿರಲು ಸಲಹೆ ನೀಡಿದೆ. ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸಹ ಕೊರೊನಾ ಸೋಂಕಿತರಲ್ಲಿ ಶೇಕಡಾ 92 ರಷ್ಟು ಜನರು ಹೋಮ್ ಕ್ವಾರಂಟೈನ್‌ಗೆ ಆದ್ಯತೆ ನೀಡುತ್ತಿದ್ದಾರೆ. ಆಸ್ಪತ್ರೆಗಳಿಗೆ ಹೋಗಲು ಹಿಂಜರಿಯುತ್ತಿದ್ದಾರೆ. ಒಟ್ಟಾರೆ ಕೊರೊನಾ ಭೀತಿ ಹೆಚ್ಚಿದ ಕಾರಣ ಜನರು ಎಚ್ಚರಿಕೆಯಿಂದ ಇರುವುದು ಅವಶ್ಯಕವಾಗಿದೆ.


ಇದನ್ನೂ ಓದಿ: ಟ್ರೇನ್‌ನಲ್ಲಿ ವೃದ್ಧ ದಂಪತಿಗಳು 22,000 ರೂ. ದಂಡ: ಆದರೆ ಮಗನಿಗೆ 40000 ರೂ. ಪರಿಹಾರ! 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.