ಬೆಂಗಳೂರು: ಕರ್ನಾಟಕ ಅಂಚೆ ಇಲಾಖೆಯಲ್ಲಿ 2637 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 


COMMERCIAL BREAK
SCROLL TO CONTINUE READING

ನೇಮಕಾತಿ ಬಗ್ಗೆ ಅಂಚೆ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಗಸ್ಟ್ 5, 2019 ರಿಂದ ಸೆಪ್ಟೆಂಬರ್ 4ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. 


ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ ನಿಂದ 10 ನೇ ತರಗತಿ ಅಥವಾ ಅದರ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಪ್ರಮಾಣಪತ್ರ ಹೊಂದಿರುವ, 18 ರಿಂದ 40 ವಯಸ್ಸಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 100ರೂ. ಅರ್ಜಿ ಸುಲಕ ಪಾವತಿಸಬೇಕಿದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಸುಲಕ ಇರುವುದಿಲ್ಲ. ಅರ್ಜಿಗಳನ್ನು ಆನ್ಲೈನ್ ನಲ್ಲಿ ಭರ್ತಿ ಮಾಡಿ, ಅಲ್ಲಿಯೇ ಶುಲ್ಕ ಪಾವತಿಸಬಹುದು. 


ಹೆಚ್ಚಿನ ಮಾಹಿತಿಗೆ http://appost.in/gdsonline/ ಈ ಲಿಂಕ್ ಕ್ಲಿಕ್ ಮಾಡಿ.