ಬೆಂಗಳೂರು:- ಸ್ಟಾಫ್ ಸೆಲೆಕ್ಷನ್ ಕಮಿಷನ್ (ಕರ್ನಾಟಕ-ಕೇರಳ) ದೆಹಲಿ ಪೊಲೀಸ್ ಇಲಾಖೆಯ ಸಬ್ ಇನ್ಸ್‍ಪೆಕ್ಟರ್ ಹುದ್ದೆಗಳಿಗೆ ಮತ್ತು ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸ್ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ.


COMMERCIAL BREAK
SCROLL TO CONTINUE READING

ದೆಹಲಿ ಪೊಲೀಸ್ ಇಲಾಖೆಯ ಸಬ್ ಇನ್ಸ್‍ಪೆಕ್ಟರ್ (ಜೆಡಿ) ಇನ್ ಸಿಎಪಿಎಫ್‍ಎಸ್, ಸಬ್ ಇನ್ಸ್‍ಪೆಕ್ಟರ್ (ಎಕ್ಸಿಕ್ಯುಟಿವ್) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.ವಿಶ್ವ ವಿದ್ಯಾನಿಲಯದ ಯಾವುದೇ ಪದವಿ ಹೊಂದಿರುವ 20 ರಿಂದ 25 ವರ್ಷದವರು ಅರ್ಹರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ ಇರುತ್ತದೆ. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇರುತ್ತದೆ.


ಅರ್ಜಿ ಶುಲ್ಕ 100 ರೂ ಗಳು ನಿಗದಿಮಾಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ಇರುತ್ತದೆ. ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಶಿವಮೊಗ್ಗ, ಉಡುಪಿ, ಕಲಬುರ್ಗಿ, ಮೈಸೂರುಗಳಲ್ಲಿ ಪರೀಕ್ಷಾ ಕೇಂದ್ರಗಳಿರುತ್ತವೆ.


ಆಸಕ್ತರು ಸಂಪೂರ್ಣ ವಿವರಗಳಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08226-224430 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅರ್ಜಿ ಸಲ್ಲಿಕೆಗೆ ಜುಲೈ 16 ಕಡೆಯ ದಿನವಾಗಿದೆ.