ಕಾಂಗ್ರೆಸ್ ಪಕ್ಷವು ಮಧ್ಯಪ್ರದೇಶದಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದೆ. ಪಕ್ಷದ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಗಳವಾರ ಬೆಳಗ್ಗೆಯಿಂದ, ಈ ಬಗ್ಗೆ ಊಹಾಪೋಹಗಳು ಕೇಳಿ ಬಂದಿದ್ದು, ಸಿಂಧಿಯಾ ಇಂದು ಗಂಭೀರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯನ್ನು ವರ್ತಿಸಲಾಗಿತ್ತು. ಈ ಊಹಾಪೋಹಗಳಿಗೆ ತೆರೆ ಎಳೆದಿರುವ ಜೋತಿರಾದಿತ್ಯ ಸಿಂಧಿಯಾ, ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ತಮ್ಮ ರಾಜೀನಾಮ ಸಲ್ಲಿಸಿದ್ದಾರೆ.
Congress leader Jyotiraditya Scindia tenders resignation to Congress President Sonia Gandhi pic.twitter.com/GcDKu3BLw8
— ANI (@ANI) March 10, 2020
ರಾಜೀನಾಮೆ ನೀಡುವುದಕ್ಕೂ ಮುನ್ನ ಜೋತಿರಾದಿತ್ಯ ಸಿಂಧಿಯಾ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ನಾಡು ನಂತರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದರು. ಈ ಸಭೆಯ ಬಳಿಕ ಸಿಂಧಿಯಾ ಇಂದು ಬಿಜೆಪಿಗೆ ಸೇರುವುದು ಬಹುತೇಕ ಖಚಿತವಾಗಿದೆ ಎಂಬ ಸುದ್ದಿಗಳು ಕೇಳಿಬಂದಿದ್ದವು. ಆದರೆ, ಇನ್ನೊಂದೆಡೆ ಕಾಂಗ್ರೆಸ್ ಹೈಕಮಾಂಡ್ ಕೂಡ ನಿರಂತರವಾಗಿ ಸಿಂಧಿಯಾ ಅವರ ಮನವೊಲಿಸಲು ಪ್ರಯತ್ನಿಸುತ್ತಿತ್ತು. ಆದರೆ, ಈ ಎಲ್ಲ ರಾಜಕೀಯ ಘಟನಾವಳಿಗಳಿಗೆ ಅಂತ್ಯ ಹಾಡಿರುವ ಸಿಂಧಿಯಾ ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ 18 ವರ್ಷಗಳಿಂದ ತಾವು ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸಿದ್ದು, ಇದೀಗ ಮುಂದುವರೆಯುವ ಅಗತ್ಯತೆ ಇದೆ ಎಂದು ಸಿಂಧಿಯಾ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.