ಮಂಡಿ: ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ನೂತನ ಶಾಸಕ ಜೈರಾಮ್ ಠಾಕೂರ್, ತಾವು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

"ಪಕ್ಷವು ಏನು ನಿರ್ಧರಿಸುತ್ತದೆಯೋ ಅದನ್ನು ಅನುಸರಿಸುತ್ತೇನೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿರುವುದು ಖುಷಿ ತಂದಿದೆ. ನಮಗೆ ಮತಾಚಲಾಯಿಸಿದ್ದಕ್ಕಾಗಿ ರಾಜ್ಯದ ಜನತೆಗೆ ಧನ್ಯವಾದ ಹೇಳುತ್ತೇನೆ "ಎಂದು ಠಾಕೂರ್ ಹೇಳಿದ್ದಾರೆ.


ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯ ವಿಜಯದ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸುತ್ತಿದ್ದ ಠಾಕೂರ್, ಬಿಜೆಪಿ ಸರ್ಕಾರವು ಕಾನೂನು ಸುವ್ಯವಸ್ಥೆ ಸೇರಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ,  ಕೆಲಸ ಮಾಡಲಿದೆ ಎಂದು ಭರವಸೆ ನೀಡಿದರು.


ಸೆರಾಜ್ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಚೆಟ್ ರಾಮ್ ಅವರನ್ನು ಸೋಲಿಸುವ ಮೂಲಕ ಠಾಕೂರ್ ಗೆಲುವು ಸಾಧಿಸಿದರು. ಈ ಹಿಂದೆ ಠಾಕೂರ್ ರಾಜ್ಯದ ಬಿಜೆಪಿ ಸಚಿವಾಲಯದಲ್ಲಿ ಕ್ಯಾಬಿನೆಟ್ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.


ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದರು. ಮಂಡಿಯಿಂದ ಹಿಮಾಚಲ ಪ್ರದೇಶ ವಿಧಾನಸಭೆಗೆ ಅವರು ಚುನಾಯಿತರಾದ ಅವರು, 1998ರಲ್ಲಿ ಅವರ ಮೊದಲ ಚುನಾವಣೆಯಲ್ಲಿ ಜಯಗಳಿಸಿದ್ದರು.


ಯೋಜಿತ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಪ್ರೇಮ್ ಕುಮಾರ್ ಧುಮಾಲ್, ಸುಜನ್ಪುರ್ ಕ್ಷೇತ್ರದಿಂದ ಕಾಂಗ್ರೆಸ್ನ ರಾಜೀಂದರ್ ರಾಣಾ ಎದುರು ಸೋಲನುಭವಿಸಿದರು. ಧುಮಾಲ್ 18,559 ಮತಗಳನ್ನು ಪಡೆದರೆ, ರಾಣಾ ಅವರು 21,492 ಮತಗಳನ್ನು ಪಡೆಡು ಜಯಗಳಿಸಿದರು. ಹಾಗೆಯೇ ಬಿಜೆಪಿಯ ರಾಜ್ಯ ಅಧ್ಯಕ್ಷ ಸತ್ಪಾಲ್ ಸಿಂಗ್ ಸಟ್ಟಿ ಯುನಾದಲ್ಲಿ ಸೋತರು.


ಚುನಾವಣೆಯಲ್ಲಿ ಪ್ರೇಮ್ ಕುಮಾರ್ ಧುಮಾಲ್ ಅವರ ಸೋಲಿನ ನಂತರ, ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸ್ಪರ್ಧೆ ತೀವ್ರಗೊಂಡಿದ್ದು, ಠಾಕೂರ್ ಮತ್ತು ಕೇಂದ್ರ ಆರೋಗ್ಯ ಮಂತ್ರಿ ಜೆ.ಪಿ. ನಡ್ಡ ರೇಸ್ ನಲ್ಲಿದ್ದಾರೆ. 


ಜಗತ್ ಪ್ರಕಾಶ್ ನಡ್ಡ 2014 ರ ನಂತರ ನರೇಂದ್ರ ಮೋದಿ ಕ್ಯಾಬಿನೆಟ್ನ ಭಾಗವಾಗಿದ್ದಾರೆ ಮತ್ತು ಪ್ರಧಾನಮಂತ್ರಿ ಮತ್ತು ಬಿಜೆಪಿ ಮುಖ್ಯಸ್ಥ ಅಮಿತ್ ಷಾ ಅವರ ನಿಕಟವರ್ತಿಯಾಗಿದ್ದಾರೆ. 


ನಿನ್ನೆ ಪ್ರಕಟವಾದ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ 44 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ 68 ಸದಸ್ಯರ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 21 ಸ್ಥಾನಗಳನ್ನು ಗೆದ್ದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರ ರಚಿಸುವ ಅವಕಾಶ ಬಿಜೆಪಿ ಪಾಲಾಗಿದೆ.