Justice DY Chandrachud : ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರು ತಮ್ಮ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ. ನ್ಯಾಯಮೂರ್ತಿ ಚಂದ್ರಚೂಡ್ ಅವರು 50ನೇ ಸಿಜೆಐ ಆಗಿ ನೇಮಕವಾಗಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರು ಈ ವರ್ಷ ನವೆಂಬರ್ 8 ರಂದು ನಿವೃತ್ತರಾಗುತ್ತಿದ್ದಾರೆ. ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 9, 2022 ರಂದು ಎರಡು ವರ್ಷಗಳ ಅವಧಿಗೆ ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಿಜೆಐಗೆ ಇದು ಸುದೀರ್ಘ ಅವಧಿಯಾಗಿದೆ.


COMMERCIAL BREAK
SCROLL TO CONTINUE READING

ಸಂಪ್ರದಾಯದ ಪ್ರಕಾರ, ಮುಖ್ಯ ನ್ಯಾಯಾಧೀಶರು ಎರಡನೇ ಹಿರಿಯ ನ್ಯಾಯಾಧೀಶರ ಹೆಸರನ್ನು ಸರ್ಕಾರಕ್ಕೆ ಶಿಫಾರಸು ಮಾಡುತ್ತಾರೆ. ಜಸ್ಟಿಸ್ ಡಿವೈ ಚಂದ್ರಚೂಡ್ ಅವರು ನ್ಯಾಯಮೂರ್ತಿ ಯುಯು ಲಲಿತ್ ನಂತರ ಎರಡನೇ ಹಿರಿಯ ನ್ಯಾಯಾಧೀಶರಾಗಿದ್ದಾರೆ. ಮಂಗಳವಾರ ಬೆಳಗ್ಗೆ 10:15ಕ್ಕೆ ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಾಧೀಶರ ಸಭೆಯಲ್ಲಿ ಸಿಜೆಐ ಯು ಯು ಲಲಿತ್ ಅವರು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಹೆಸರನ್ನು ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದರು. ಸಿಜೆಐ ಲಲಿತ್ ಅವರ ಶಿಫಾರಸನ್ನು ಕಾನೂನು ಸಚಿವಾಲಯಕ್ಕೆ ಪತ್ರದ ರೂಪದಲ್ಲಿ ಕಳುಹಿಸಲಾಗುವುದು.


ಇದನ್ನೂ ಓದಿ : Video : ಅಭಿಮಾನಿಗೆ ಆಟೋಗ್ರಾಪ್ ನೀಡಿ, ಸ್ಪೆಸಲ್ ಗಿಫ್ಟ್ ಪಡೆದ ಪಿಎಂ ಮೋದಿ!


ನ್ಯಾ. ಚಂದ್ರಚೂಡ್ ಅವರ ವೃತ್ತಿಜೀವನ


ನ್ಯಾಯಮೂರ್ತಿ ಚಂದ್ರಚೂಡ್ ಅವರು 13 ಮೇ 2016 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು. ಇದಕ್ಕೂ ಮೊದಲು ಅವರು 31 ಅಕ್ಟೋಬರ್ 2013 ರಿಂದ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಅವರು 29 ಮಾರ್ಚ್ 2000 ರಂದು ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು. ಅವರು 1998 ರಲ್ಲಿ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡರು. ಬಾಂಬೆ ಹೈಕೋರ್ಟ್ ಅವರನ್ನು ಜೂನ್ 1998 ರಲ್ಲಿ ಹಿರಿಯ ವಕೀಲ ಎಂದು ಹೆಸರಿಸಿತು.


ನ್ಯಾಯಮೂರ್ತಿ ಚಂದ್ರಚೂಡ್ ಅವರ ತಂದೆ, ಜಸ್ಟಿಸ್ ವೈವಿ ಚಂದ್ರಚೂಡ್ ಅವರು 2 ಫೆಬ್ರವರಿ 1978 ರಿಂದ 11 ಜುಲೈ 1985 ರವರೆಗೆ ಭಾರತದ 16 ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದರು.


ಇದನ್ನೂ ಓದಿ : Viral Video: ಜಿಮ್ ನಲ್ಲಿ ಜುಟ್ಟು ಹಿಡಿದು ಜಗಳವಾಡಿದ ನಾರಿಮಣಿಯರು: ವಿಡಿಯೋ ನೋಡಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.