ನವದೆಹಲಿ: ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ನಲ್ಲಿ ಇದ್ದಿದ್ದರೆ ಮುಖ್ಯಮಂತ್ರಿಯಾಗಬಹುದಿತ್ತು, ಆದರೆ ಈಗ ಅವರು ಬಿಜೆಪಿಯಲ್ಲಿ ಬ್ಯಾಕ್ ಬೆಂಚರ್ ಆಗಿ ಮಾರ್ಪಟ್ಟಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಾಜ್ಯಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಬಿಜೆಪಿ ಸಂಸದರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ


ಮೂಲಗಳ ಪ್ರಕಾರ, ಕಾಂಗ್ರೆಸ್ ಸಂಘಟನೆಯ ಮಹತ್ವದ ಬಗ್ಗೆ ಪಕ್ಷದ ಯುವ ವಿಭಾಗದೊಂದಿಗೆ ಮಾತನಾಡಿದ ರಾಹುಲ್ ಗಾಂಧಿ,"ಅವರು (ಸಿಂಧಿಯಾ) (Jyotiraditya Scindia) ಅವರು ಕಾಂಗ್ರೆಸ್ ಜೊತೆ ಉಳಿದುಕೊಂಡಿದ್ದರೆ ಸಿಎಂ ಆಗಬಹುದಿತ್ತು,ಆದರೆ ಈಗ ಅವರು ಬಿಜೆಪಿಯಲ್ಲಿ ಬ್ಯಾಕ್ ಬೆಂಚರ್ ಆಗಿ ಉಳಿದುಕೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಕೆಲಸ ಮಾಡುವ ಮೂಲಕ ಸಂಘಟನೆಯನ್ನು ಬಲಪಡಿಸುವ ಆಯ್ಕೆಯನ್ನು ಹೊಂದಿದ್ದೇನೆ.ಅವರಿಗೆ ನಾನು ನೀವು ಒಂದು ದಿನ ಮುಖ್ಯಮಂತ್ರಿಯಾಗುತ್ತಿರಿ ಎಂದು ಹೇಳಿದ್ದೆ, ಆದ್ರೆ ಅವರು ಇನ್ನೊಂದು ಮಾರ್ಗವನ್ನು ಆಯ್ದುಕೊಂಡರು" ಎಂದು ರಾಹುಲ್ ಗಾಂಧಿ ಹೇಳಿದರು.


ಇದನ್ನೂ ಓದಿ: Viral Video: ಹಸ್ತಕ್ಕೆ ಮತ ಹಾಕಿ ಎಂದ ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ...!


ಮೂಲಗಳ ಪ್ರಕಾರ, "ಇದನ್ನು ಬರೆದಿಟ್ಟುಕೊಳ್ಳಿ, ಅವರು ಎಂದಿಗೂ ಅಲ್ಲಿ ಮುಖ್ಯಮಂತ್ರಿಯಾಗುವುದಿಲ್ಲ.ಅದಕ್ಕಾಗಿ ಅವರು ಇಲ್ಲಿಗೆ ಹಿಂತಿರುಗಬೇಕಾಗಿದೆ" ಎಂದು ಹೇಳಿದರು.ಆರ್‌ಎಸ್‌ಎಸ್‌ನ ಸಿದ್ಧಾಂತದ ವಿರುದ್ಧ ಹೋರಾಡಲು ಮತ್ತು ಯಾರಿಗೂ ಹೆದರಬೇಡಿ ಎಂದು ಅವರು ಯುವ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದರು. ಸಿಂಧಿಯಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಕಳೆದ ಮಾರ್ಚ್‌ನಲ್ಲಿ ಬಿಜೆಪಿಗೆ ಸೇರಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.