ಚೆನ್ನೈ: ಏಪ್ರಿಲ್ ಆರಂಭದಿಂದ ವಿಧಾನಸಭಾ ಚುನಾವಣೆಗೆ ತಮಿಳುನಾಡು ಸಿದ್ಧವಾಗಿದೆ. ಕಾಂಗ್ರೆಸ್ ಮತ್ತು ಡಿಎಂಕೆ ಜೊತೆಗೆ ಬಿಜೆಪಿ, ಎಐಎಡಿಎಂಕೆ ಪಕ್ಷಗಳು ಮೊದಲ ಹಂತದ ಚುನಾವಣಾ ಕ್ಷೇತ್ರಗಳಿಗೆ ತಮ್ಮ ಅಭ್ಯರ್ಥಿಗಳನ್ನು ಹೆಸರಿಸಿವೆ. ಈ ನಡುವೆ ಹಿರಿಯ ತಮಿಳು ನಟ ಮತ್ತು ಮಕ್ಕಳ್ ನೀದಿ ಮಾಯಮ್ ಪಕ್ಷದ ಸ್ಥಾಪಕ ಅಧ್ಯಕ್ಷ ಕಮಲ್ ಹಾಸನ್, ಕೊಯಂಬತೂರ್ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಎರಡಕ್ಕೂ ತಮ್ಮದೇ ಆದ ವೋಟ್ ಬ್ಯಾಂಕ್ ಇರುವ ತಮಿಳುನಾಡಿನ ಪಶ್ಚಿಮ ಭಾಗದಲ್ಲಿರುವ ಈ ಕ್ಷೇತ್ರವನ್ನು ಕಮಲ್ ಹಾಸನ್(Kamal Haasan) ಆಯ್ದುಕೊಂಡಿರುವುದು ಅಚ್ಚರಿ ಮೂಡಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ನಗರ ಪ್ರದೇಶದ ಮತದಾರರು ಕಮಲ್ರ ಪಕ್ಷಕ್ಕೆ ಹೆಚ್ಚು ಒಲವು ತೋರಿಸಿದ್ದು, ಅವರು ಚೆನ್ನೈನ ಮೈಲಾಪುರ ಅಥವಾ ಆಲಂದೂರ್ ಕ್ಷೇತ್ರದಿಂದ ಸ್ಪರ್ಧಿಸುವರೆಂಬ ಊಹೆಗಳು ಸಾಗಿದ್ದವು. ಇದೀಗ ಕಮಲ್ ಹಾಸನ್ ತಮ್ಮ ಆಯ್ಕೆಯನ್ನು ಸ್ಪಷ್ಟಪಡಿಸಿದ್ದಾರೆ.
ಜೆಎನ್‌ಯು ದೇಶದ್ರೋಹ ಪ್ರಕರಣ: 7 ಆರೋಪಿಗಳಿಗೆ ಜಾಮೀನು
ಕೊಯಂಬತೂರ್ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿಜೆಪಿ(BJP) ರಾಷ್ಟ್ರೀಯ ಮಹಿಳಾ ವಿಭಾಗದ ಅಧ್ಯಕ್ಷೆ ವನತಿ ಶ್ರೀನಿವಾಸನ್ ಇದ್ದರೆ, ಕಾಂಗ್ರೆಸ್ನಿಂದ ತಮಿಳುನಾಡು ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಮಯೂರ ಜಯಕುಮಾರ್ ಸ್ಪರ್ಧಿಸಲಿದ್ದಾರೆ.
New Driving Licence: 'ಹೊಸ ಡ್ರೈವಿಂಗ್ ಲೈಸೆನ್ಸ್' ಗಾಗಿ ಅರ್ಜಿ ಸಲ್ಲಿಸುವವರೇ ದಯವಿಟ್ಟು ಗಮನಿಸಿ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.