ಚೆನ್ನೈ: ಏಪ್ರಿಲ್ ಆರಂಭದಿಂದ ವಿಧಾನಸಭಾ ಚುನಾವಣೆಗೆ ತಮಿಳುನಾಡು ಸಿದ್ಧವಾಗಿದೆ. ಕಾಂಗ್ರೆಸ್ ಮತ್ತು ಡಿಎಂಕೆ ಜೊತೆಗೆ ಬಿಜೆಪಿ, ಎಐಎಡಿಎಂಕೆ ಪಕ್ಷಗಳು ಮೊದಲ ಹಂತದ ಚುನಾವಣಾ ಕ್ಷೇತ್ರಗಳಿಗೆ ತಮ್ಮ ಅಭ್ಯರ್ಥಿಗಳನ್ನು ಹೆಸರಿಸಿವೆ. ಈ ನಡುವೆ ಹಿರಿಯ ತಮಿಳು ನಟ ಮತ್ತು ಮಕ್ಕಳ್ ನೀದಿ ಮಾಯಮ್ ಪಕ್ಷದ ಸ್ಥಾಪಕ ಅಧ್ಯಕ್ಷ ಕಮಲ್ ಹಾಸನ್, ಕೊಯಂಬತೂರ್ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಇಂದು ನಾಮಪತ್ರ ಸಲ್ಲಿಸಿದ್ದಾರೆ.


COMMERCIAL BREAK
SCROLL TO CONTINUE READING

ಬಿಜೆಪಿ ಮತ್ತು ಕಾಂಗ್ರೆಸ್​ ಎರಡಕ್ಕೂ ತಮ್ಮದೇ ಆದ ವೋಟ್ ಬ್ಯಾಂಕ್ ಇರುವ ತಮಿಳುನಾಡಿನ ಪಶ್ಚಿಮ ಭಾಗದಲ್ಲಿರುವ ಈ ಕ್ಷೇತ್ರವನ್ನು ಕಮಲ್ ಹಾಸನ್(Kamal Haasan) ಆಯ್ದುಕೊಂಡಿರುವುದು ಅಚ್ಚರಿ ಮೂಡಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ನಗರ ಪ್ರದೇಶದ ಮತದಾರರು ಕಮಲ್​ರ ಪಕ್ಷಕ್ಕೆ ಹೆಚ್ಚು ಒಲವು ತೋರಿಸಿದ್ದು, ಅವರು ಚೆನ್ನೈನ ಮೈಲಾಪುರ ಅಥವಾ ಆಲಂದೂರ್ ಕ್ಷೇತ್ರದಿಂದ ಸ್ಪರ್ಧಿಸುವರೆಂಬ ಊಹೆಗಳು ಸಾಗಿದ್ದವು. ಇದೀಗ ಕಮಲ್ ಹಾಸನ್ ತಮ್ಮ ಆಯ್ಕೆಯನ್ನು ಸ್ಪಷ್ಟಪಡಿಸಿದ್ದಾರೆ.


ಜೆಎನ್‌ಯು ದೇಶದ್ರೋಹ ಪ್ರಕರಣ: 7 ಆರೋಪಿಗಳಿಗೆ ಜಾಮೀನು


ಕೊಯಂಬತೂರ್ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿಜೆಪಿ(BJP) ರಾಷ್ಟ್ರೀಯ ಮಹಿಳಾ ವಿಭಾಗದ ಅಧ್ಯಕ್ಷೆ ವನತಿ ಶ್ರೀನಿವಾಸನ್ ​ಇದ್ದರೆ, ಕಾಂಗ್ರೆಸ್​ನಿಂದ ತಮಿಳುನಾಡು ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಮಯೂರ ಜಯಕುಮಾರ್ ಸ್ಪರ್ಧಿಸಲಿದ್ದಾರೆ.


New Driving Licence: 'ಹೊಸ ಡ್ರೈವಿಂಗ್ ಲೈಸೆನ್ಸ್' ಗಾಗಿ ಅರ್ಜಿ ಸಲ್ಲಿಸುವವರೇ ದಯವಿಟ್ಟು ಗಮನಿಸಿ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.