ಡಿ.17ಕ್ಕೆ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಕಮಲನಾಥ್ ಪ್ರಮಾಣವಚನ ಸ್ವೀಕಾರ

ಕಮಲನಾಥ್ ಮಾಯಾವತಿ ಮತ್ತು ಅಖಿಲೇಶ್ ಯಾದವ್ ಅವರನ್ನು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.  

Last Updated : Dec 14, 2018, 03:08 PM IST
ಡಿ.17ಕ್ಕೆ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಕಮಲನಾಥ್ ಪ್ರಮಾಣವಚನ ಸ್ವೀಕಾರ title=

ಭೋಪಾಲ್: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ ಫಲಿತಾಂಶದ ಬಳಿಕ ಕಗ್ಗಂಟಾಗಿ ಪರಿಣಮಿಸಿದ್ದ ಮಧ್ಯಪ್ರದೇಶ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೇ ಮುಗಿದಿದ್ದು, ಗುರುವಾರ ಕಾಂಗ್ರೆಸ್ ಹೈಕಮಾಂಡ್ ಕಮಲ್ ನಾಥ್ ಅವರನ್ನು ಮುಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ.

ರಾಜ್ಯದಲ್ಲಿ ನೂತನ ಸರ್ಕಾರ ರಚಿಸುವಂತೆ ಗವರ್ನರ್ ಕಮಲನಾಥ್ ಅವರನ್ನು ಆಮಂತ್ರಿಸಿದ್ದು, ಡಿಸೆಂಬರ್ 17 ರಂದು ಕಮಲ್ ನಾಥ್ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಸುದ್ದಿ ಸಂಸ್ಥೆ ANI ಪ್ರಕಾರ, ಕಮಲ್ ನಾಥ್ ಡಿಸೆಂಬರ್ 17 ರಂದು ಭೋಪಾಲ್ನ ಲಾಲ್ ಪೆರೇಡ್ ಮೈದಾನದಲ್ಲಿ 01:30 ಕ್ಕೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕಮಲನಾಥ್ ಮಾಯಾವತಿ ಮತ್ತು ಅಖಿಲೇಶ್ ಯಾದವ್ ಅವರನ್ನು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಮಲ್ ನಾಥ್ ಪದಗ್ರಹಣಕ್ಕೆ ತೆರಳಲಿದ್ದಾರೆ. ರಾಹುಲ್ ಗಾಂಧಿಯವರಿಗಾಗಿ ಲಾಲ್ ಪೆರೇಡ್ ಮೈದಾನದಲ್ಲಿ ಮೋತಿಲಾಲ್ ನೆಹರು ಕ್ರೀಡಾಂಗಣದಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗುತ್ತಿದೆ. ಅನೇಕ ವಿಐಪಿಗಳಿಗಾಗಿ ಹೆಲಿಪ್ಯಾಡ್ಗಳನ್ನು ರಚಿಸಲಾಗುತ್ತಿದೆ. ಸಮಾರಂಭದಲ್ಲಿ ಸಾಧು-ಸಂತರನ್ನೂ ಕೂಡಾ ಅಹ್ವಾನಿಸಲಾಗುತ್ತದೆಂದು ಹೇಳಲಾಗುತ್ತಿದೆ. ಇದರಲ್ಲಿ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳೂ ಕೂಡಾ ಸೇರ್ಪಡೆಗೊಳ್ಳಲಿದ್ದಾರೆ.

ಗುರುವಾರ ಇಡೀ ದಿನ ಸಿಎಂ ಗಾದಿಗೇರುವ ಅಭ್ಯರ್ಥಿ ಆಯ್ಕೆ ಕಸರತ್ತು ಬಳಿಕ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮಧ್ಯಸ್ಥಿಕೆಯೊಂದಿಗೆ ಮಧ್ಯಪ್ರದೇಶದ ಸಿಎಂ ಆಗಿ ಹಿರಿಯ ಮುಖಂಡ ಕಮಲನಾಥ್ ಆಯ್ಕೆಯಾದರು. ಮಧ್ಯಪ್ರದೇಶ ಕಾಂಗ್ರೆಸ್ ಈ ಮಾಹಿತಿಯನ್ನು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಟ್ವೀಟ್ ಮೂಲಕ ತಿಳಿಸಿದೆ. ಕಮಲ್ ನಾಥ್ ಚಿಂದವಾಡಾ ಕ್ಷೇತ್ರದಿಂದ ಒಂಬತ್ತು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 

ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ನನಗೆ ಒಂದು ಮೈಲಿಗಲ್ಲು, ನನಗೆ ಬೆಂಬಲ ನೀಡಿದ್ದಕ್ಕಾಗಿ ಜ್ಯೋತಿರಾರಿದ್ಯ ಸಿಂಧ್ಯ ಅವರಿಗೆ ಧನ್ಯವಾದಗಳು ಎಂದು ತಿಳಿಸಿದರು. ನಾವೆಲ್ಲರೂ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಪೂರೈಸಲು ಶ್ರಮಿಸುತ್ತೇವೆ ಎಂದು ಅವರು ಹೇಳಿದರು.

Trending News