ಸೆಪ್ಟೆಂಬರ್ 28 ಕ್ಕೆ ಕಾಂಗ್ರೆಸ್ ಪಕ್ಷ ಸೇರಲಿರುವ ಕನ್ನಯ್ಯ ಕುಮಾರ್, ಜಿಗ್ನೇಶ್ ಮೇವಾನಿ

ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ಗುಜರಾತ್‌ನ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ (ಆರ್‌ಡಿಎಎಂ) ಶಾಸಕ ಜಿಗ್ನೇಶ್ ಮೇವಾನಿ ಅವರು ಸೆಪ್ಟೆಂಬರ್ 28 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Written by - ZH Kannada Desk | Last Updated : Sep 25, 2021, 08:13 PM IST
  • ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ಗುಜರಾತ್‌ನ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ (ಆರ್‌ಡಿಎಎಂ) ಶಾಸಕ ಜಿಗ್ನೇಶ್ ಮೇವಾನಿ ಅವರು ಸೆಪ್ಟೆಂಬರ್ 28 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸೆಪ್ಟೆಂಬರ್ 28 ಕ್ಕೆ ಕಾಂಗ್ರೆಸ್ ಪಕ್ಷ ಸೇರಲಿರುವ ಕನ್ನಯ್ಯ ಕುಮಾರ್, ಜಿಗ್ನೇಶ್ ಮೇವಾನಿ

ನವದೆಹಲಿ: ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ಗುಜರಾತ್‌ನ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ (ಆರ್‌ಡಿಎಎಂ) ಶಾಸಕ ಜಿಗ್ನೇಶ್ ಮೇವಾನಿ ಅವರು ಸೆಪ್ಟೆಂಬರ್ 28 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Congress : ಶೀಘ್ರದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಕನ್ಹಯ್ಯ ಕುಮಾರ್, ಜಿಗ್ನೇಶ್ ಮೇವಾನಿ!

ಸಿಪಿಐ ನಾಯಕ ಕನ್ಹಯ್ಯ ಕುಮಾರ್ ಅವರು ರಾಹುಲ್ ಗಾಂಧಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಮತ್ತು ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಸೇರುವ ನಿರೀಕ್ಷೆಯಿದೆ ಎಂದು ಎಎನ್ಐ ಈ ಹಿಂದೆ ವರದಿ ಮಾಡಿತ್ತು. ರಾಹುಲ್ ಗಾಂಧಿ ಯುವ ನಾಯಕರ ತಂಡವನ್ನು ನಿರ್ಮಿಸುತ್ತಿದ್ದಾರೆ.ಈ ತಂಡದಲ್ಲಿ ಕನ್ನಯ್ಯ ಕುಮಾರ್ (Kanhaiya Kumar) ಮತ್ತು ಮೇವಾನಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆಯಿದೆ ಎನ್ನಲಾಗಿದೆ."ಕನ್ಹಯ್ಯಾ ಕುಮಾರ್ ಬಿಹಾರದಲ್ಲಿ ಪಕ್ಷದ ಪ್ರಮುಖ ಯುವ ಮುಖವಾಗಿ ಕಾರ್ಯನಿರ್ವಹಿಸಲಿದ್ದಾರೆ ಮತ್ತು ರಾಷ್ಟ್ರೀಯ ಪಾತ್ರವನ್ನು ವಹಿಸಲಿದ್ದಾರೆ"ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆಯೇ ಕನ್ನಯ್ಯ ಕುಮಾರ್ ?

ಈ ವಿಷಯವನ್ನು ಚರ್ಚಿಸಲು ಕುಮಾರ್ ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ.ಕಾಂಗ್ರೆಸ್ ಪಕ್ಷವು ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ರಾಷ್ಟ್ರೀಯ ಚಳುವಳಿಯನ್ನು ರೂಪಿಸುತ್ತಿದೆ ಎಂದು ಹೇಳಲಾಗಿದೆ.ಇದಕ್ಕಾಗಿ ಪ್ರಭಾವಶಾಲಿ ಯುವ ನಾಯಕರನ್ನು ಗುರುತಿಸಿ ರಾಹುಲ್ ಗಾಂಧಿ ಯುವ ನಾಯಕರ ತಂಡವನ್ನು ರಚಿಸುತ್ತಿದ್ದಾರೆ.

ಇದನ್ನೂ ಓದಿ: ದೆಹಲಿ ಸರ್ಕಾರಕ್ಕೆ ಥ್ಯಾಂಕ್ಯೂ, ಕೋರ್ಟ್ ನಲ್ಲಿ ವಿಚಾರಣೆ ತ್ವರಿತವಾಗಲಿ, ಟಿವಿಯಲ್ಲಿ ಅಲ್ಲ- ಕನ್ನಯ್ಯ ಕುಮಾರ್

ಪ್ರಸ್ತುತ ಸಿಪಿಐ ನಾಯಕರಾಗಿರುವ ಕನ್ನಯ್ಯ ಕುಮಾರ್ ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿದ್ದಾರೆ.ಮೇವಾನಿ ಗುಜರಾತ್‌ನ ವಡ್ಗಾಮ್ ಕ್ಷೇತ್ರದ ಸ್ವತಂತ್ರ ಶಾಸಕರು ಮತ್ತು ಆರ್‌ಡಿಎಎಮ್‌ನ ಸಂಚಾಲಕರಾಗಿದ್ದಾರೆ.2017 ರ ಗುಜರಾತ್ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವಡ್ಗಮ್ ಕ್ಷೇತ್ರದಲ್ಲಿ ಮೇವಾನಿ ವಿರುದ್ಧ ತನ್ನ ಅಭ್ಯರ್ಥಿಯನ್ನು ನಿಲ್ಲಿಸಿರಲಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

More Stories

Trending News