ಬೆಗುಸರಾಯ್ ಕ್ಷೇತ್ರದಿಂದ ಸಿಪಿಐ ಅಭ್ಯರ್ಥಿಯಾಗಿ ಕನ್ಹಯ್ಯ ಕುಮಾರ್ ನಾಮಪತ್ರ ಸಲ್ಲಿಕೆ
ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಮುಖಂಡ ಕನ್ಹಯ್ಯ ಕುಮಾರ್ ಬಿಹಾರದ ಬೆಗುಸರಾಯ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.
ಬಿಹಾರ: ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಮುಖಂಡ ಕನ್ಹಯ್ಯ ಕುಮಾರ್ ಬಿಹಾರದ ಬೆಗುಸರಾಯ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಮಂಗಳವಾರ(ಏಪ್ರಿಲ್ 9) ನಾಮಪತ್ರ ಸಲ್ಲಿಸಿದರು.
ಬೆಗುಸಾರೈನಲ್ಲಿ ಕನ್ಹಯ್ ಬಿಜೆಪಿ ಪಕ್ಷವನ್ನು ಎದುರಿಸಲಿದ್ದಾರೆ. ಬಿಹಾರನಲ್ಲಿ ಆರ್ಜೆಡಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳು ಮಹಾಘಟಬಂದನ್ ಮಾಡಿಕೊಂಡಿದ್ದು, ಆರ್ಜೆಡಿ 20 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ, ಹೆಚ್ಎಎಂ 3, ಆರ್ಎಲ್ಎಸ್ಪಿ 5, ವಿಐಪಿ 3 ಮತ್ತು ಸಿಪಿಐ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದೆ.
ಬಿಹಾರ ರಾಜ್ಯದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 11, 18, 23, 29 ಮತ್ತು ಮೇ 6, 12, 19 ರಂದು ಚುನಾವಣೆ ನಡೆಯಲಿದೆ. ಮೇ 23 ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ.