ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಕನ್ನಡಿಗ ಆಯ್ಕೆ
ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕರ್ನಾಟಕದ ಬಿ.ವಿ. ಶ್ರೀನಿವಾಸ್
ನವದೆಹಲಿ: ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಕನ್ನಡಿಗ ಬಿ.ವಿ. ಶ್ರೀನಿವಾಸ್ ಆಯ್ಕೆಯಾಗಿದ್ದಾರೆ.
ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮಂಗಳವಾರ AICC ಅಧ್ಯಕ್ಷರಾದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನೂತನ ರಾಷ್ಟ್ರೀಯ ಅಧ್ಯಕ್ಷ ಕೇಶವ್ ಚಂದ್ ಹಾಗೂ AICC ಕಾರ್ಯದರ್ಶಿ ಕೃಷ್ಣ ಅವರು ಉಪಸ್ಥಿತರಿದ್ದರು.