Kapil Sibal left Congress : ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಕಪಿಲ್ ಸಿಬಲ್, ಸಮಾಜವಾದಿ ಪಕ್ಷದ ಬೆಂಬಲದಿಂದ ರಾಜ್ಯಸಭೆಗೆ ನಾಮಿನೇಷನ್!
ಎಸ್ಪಿ ಬೆಂಬಲದೊಂದಿಗೆ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಕಪಿಲ್ ಸಿಬಲ್ ಅವರು ಮೇ 16 ರಂದು ಕಾಂಗ್ರೆಸ್‌ಗೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದರು.
Kapil Sibal left Congress Party : ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಅವರು ಕೈಗೆ ಗುಡ್ ಬೈ ಹೇಳಿ ಸಮಾಜವಾದಿ ಪಕ್ಷದಿಂದ ರಾಜ್ಯಸಭಾ ಚುನಾವಣೆಗೆ ನಾಮಿನೇಷನ್ ಫೈಲ್ ಮಾಡಿದ್ದಾರೆ. ಎಸ್‌ಪಿ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಸಮ್ಮುಖದಲ್ಲಿ ಕಪಿಲ್ ಸಿಬಲ್ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅಖಿಲೇಶ್ ಯಾದವ್ ಜೊತೆಗೆ ಎಸ್ಪಿ ಸಂಸದ ರಾಮ್ ಗೋಪಾಲ್ ಯಾದವ್ ಕೂಡ ಉಪಸ್ಥಿತರಿದ್ದರು.
ಮೇ 16 ರಂದು ಕಪಿಲ್ ಸಿಬಲ್ ಕಾಂಗ್ರೆಸ್‌ಗೆ ರಾಜೀನಾಮೆ
ಎಸ್‌ಪಿ ಬೆಂಬಲದೊಂದಿಗೆ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಕಪಿಲ್ ಸಿಬಲ್ ಅವರು ಮೇ 16 ರಂದು ಕಾಂಗ್ರೆಸ್‌ಗೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದರು. ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಕಪಿಲ್ ಸಿಬಲ್, ಮೇ 16ರಂದು ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೆ. ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ನಾನು ಯಾವಾಗಲೂ ದೇಶದಲ್ಲಿ ಸ್ವತಂತ್ರ ಧ್ವನಿಯಾಗಲು ಬಯಸುತ್ತೇನೆ. 'ಸ್ವತಂತ್ರ ಧ್ವನಿ ಹೊಂದುವುದು ಮುಖ್ಯ. ವಿರೋಧ ಪಕ್ಷದಲ್ಲಿ ಉಳಿಯುವ ಮೂಲಕ ನಾವು ಮೋದಿ ಸರ್ಕಾರವನ್ನು ವಿರೋಧಿಸಲು ಮೈತ್ರಿ ಮಾಡಿಕೊಳ್ಳಲು ಇಷ್ಟ ಪಡುತ್ತೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : Baramulla Encounter : ಬಾರಾಮುಲ್ಲಾದಲ್ಲಿ ಮೂವರು ಪಾಕ್ ಉಗ್ರರ ಎನ್ಕೌಂಟರ್, ಒಬ್ಬ ಯೋಧ ಹುತಾತ್ಮ!
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.