Karnataka BJP Unit Revamped: ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಡಿಸೆಂಬರ್‌ 23 ಶನಿವಾರದಂದು 10 ಉಪಾಧ್ಯಕ್ಷರು ಸೇರಿದಂತೆ ರಾಜ್ಯ ಮಟ್ಟದ ಪದಾಧಿಕಾರಿಗಳನ್ನು ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ನೇಮಕ ಮಾಡಿದ್ದಾರೆ. ಶಿಕಾರಿಪುರ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದೂವರೆ ತಿಂಗಳ ನಂತರ ಈ ಘೋಷಣೆ ಹೊರಬಿದ್ದಿದೆ.


COMMERCIAL BREAK
SCROLL TO CONTINUE READING

ಪಕ್ಷ ಬಿಡುಗಡೆ ಮಾಡಿರುವ ಪಟ್ಟಿಯ ಪ್ರಕಾರ 10 ನೂತನ ಉಪಾಧ್ಯಕ್ಷರಾಗಿ ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಬಿ.ಎ.ಬಸವರಾಜ್ (ಬೈರತಿ), ಹರತಾಳು ಹಾಲಪ್ಪ, ನರಸಿಂಹ ನಾಯಕ್ (ರಾಜುಗೌಡ), ಶಾಸಕರಾದ ಅನಿಲ್ ಬೆನಕೆ, ಎನ್.ಮಹೇಶ್, ರೂಪಲಿ ಸಂತೋಷ್ ನಾಯ್ಕ್, ಡಾ.ಬಸವರಾಜ ಕೇಲಗಾರ್, ಮಾಳವಿಕಾ ಅವಿನಾಶ್ ಮತ್ತು ಎಂ ರಾಜೇಂದ್ರ  ಆಯ್ಕೆಯಾಗಿದ್ದಾರೆ. 


ಇದನ್ನೂ ಓದಿ: ದೆಹಲಿಯಲ್ಲಿ ಮತ್ತೊಂದು ಹಗರಣ? ಆರೋಗ್ಯ ಇಲಾಖೆಯಲ್ಲಿ 300 ಕೋಟಿ ರೂ. ಭ್ರಷ್ಟಾಚಾರ!


ಬಿಜೆಪಿ ಪಕ್ಷವು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಾಜಿ ಸಚಿವ ವಿ.ಸುನೀಲ್ ಕುಮಾರ್, ಮಾಜಿ ಶಾಸಕರಾದ ಪಿ.ರಾಜೀವ್, ಎನ್.ಎಸ್.ನಂದೀಶ್ ರೆಡ್ಡಿ, ಜೆ.ಪ್ರೀತಂ ಗೌಡ. ಆಗಿದ್ದಾರೆ. 


ಪಕ್ಷದ ಕಾರ್ಯದರ್ಶಿಗಳಾಗಿ ಶೈಲೇಂದ್ರ ಬೆಲ್ದಾಳೆ, ಡಿ.ಎಸ್. ರಾಜ್ಯ ಬಿಜೆಪಿ ಖಜಾಂಚಿಯಾಗಿ ಸುಬ್ಬನರಸಿಂಹ, ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ಸಿ ಮಂಜುಳಾ, ಯುವ ಮೋರ್ಚಾ ಅಧ್ಯಕ್ಷರಾಗಿ ಧೀರಜ್ ಮುನಿರಾಜ್ ಕರ್ತವ್ಯ ನಿರ್ವಹಿಸಲಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.