ನವದೆಹಲಿ: Hijab Case - ಹಿಜಾಬ್ ಪ್ರಕರಣದ ಕುರಿತು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ್ದು, ಹಿಜಾಬ್ (Hijab) ಇಸ್ಲಾಂ ಧರ್ಮದ ಅಗತ್ಯ ಭಾಗವಲ್ಲ ಎಂದು ಹೇಳಿದೆ. ರಾಜ್ಯ ಹೈ ಕೋರ್ಟ್ ತೀರ್ಪಿಗೆ ಪ್ರತಿಕ್ರಿಯೆ ನೀಡಿರುವ ಎಐಎಂಐಎಂ (AIMIM) ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi), ತಾವು ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು (Hijab Case Verdict) ತಾವು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.
ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ನಾನು ಒಪ್ಪುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ ಟ್ವೀಟ್ ಮಾಡಿದ್ದಾರೆ. ತೀರ್ಪನ್ನು ಒಪ್ಪದಿರುವುದು ನನ್ನ ಹಕ್ಕು ಮತ್ತು ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದ್ದಾರೆ. AIMPLB ಮಾತ್ರವಲ್ಲದೆ ಇತರ ಧರ್ಮಗಳ ಸಂಘಟನೆಗಳೂ ಈ ನಿರ್ಧಾರದ ವಿರುದ್ಧ ಮೇಲ್ಮನವಿ ಸಲ್ಲಿಸುತ್ತವೆ ಎಂದು ನಾನು ಭಾವಿಸುತ್ತೇನೆ ಎಂದು ಒವೈಸಿ ಹೇಳಿದ್ದಾರೆ.
1. I disagree with Karnataka High Court's judgement on #hijab. It’s my right to disagree with the judgement & I hope that petitioners appeal before SC
2. I also hope that not only @AIMPLB_Official but also organisations of other religious groups appeal this judgement...
— Asaduddin Owaisi (@asadowaisi) March 15, 2022
14. I hope this judgement will not be used to legitimise harassment of hijab wearing women. One can only hope and eventually be disappointed when this starts happening to hijab wearing women in banks, hospitals, public transport etc
— Asaduddin Owaisi (@asadowaisi) March 15, 2022
ಈ ಕುರಿತು ಅವರು ಮಾಡಿರುವ ಮತ್ತೊಂದು ಟ್ವೀಟ್‌ನಲ್ಲಿ, ಮುಸ್ಲಿಮರು (ಸಲಾಹ್, ಹಿಜಾಬ್, ರೋಜಾ, ಇತ್ಯಾದಿ) ಕಟ್ಟುನಿಟ್ಟಾಗಿ ಅನುಸರಿಸುವ ಮೂಲಕ ಶಿಕ್ಷಣ ಪಡೆಯುವುದು ಅಲ್ಲಾಹನ ಆಜ್ಞೆಯಾಗಿದೆ ಎಂದು ಓವೈಸಿ ಹೇಳಿದ್ದಾರೆ. ಇದೀಗ ಈ ತೀರ್ಪಿನ ಮೂಲಕ ಸರ್ಕಾರ ಹೆಣ್ಣುಮಕ್ಕಳಿಗೆ ಆಯ್ಕೆ ಮಾಡುವಂತೆ ಒತ್ತಾಯಿಸುತ್ತಿದೆ. ಇದುವರೆಗೆ ನ್ಯಾಯಾಂಗವು ಮಸೀದಿ, ಗಡ್ಡ ಮತ್ತು ಇದೀಗ ಹಿಜಾಬ್ ಅನ್ನು ಅನಿವಾರ್ಯವಲ್ಲ ಎಂದು ಘೋಷಿಸಿದೆ. ಧರ್ಮದ ಮುಕ್ತ ಅಭಿವ್ಯಕ್ತಿಗೆ ಏನು ಬಾಕಿ ಉಳಿದಿದೆ?' ಎಂದು ಒವೈಸಿ ಪ್ರಶ್ನಿಸಿದ್ದಾರೆ.
15. One can give a more detailed response whence the full judgement is made available. For now, this thread is based on the oral order dictated in court.
— Asaduddin Owaisi (@asadowaisi) March 15, 2022
ಇದನ್ನೂ ಓದಿ-Hijab verdict: ‘ಹಿಜಾಬ್ ಒಳಗಿರುವ ಮತ ಗಟ್ಟಿಗೊಳಿಸಲು ಯತ್ನಿಸಿದ ಸಿದ್ದರಾಮಯ್ಯಗೆ ಹಿನ್ನಡೆ’
ಮುಂದಿನ ಟ್ವೀಟ್‌ನಲ್ಲಿ ಬರೆದುಕೊಂಡಿರುವ ಒವೈಸಿ, 'ಹಿಜಾಬ್ ಧರಿಸಿದ ಮಹಿಳೆಯರಿಗೆ ಕಿರುಕುಳ ನೀಡುವುದನ್ನು ಕಾನೂನುಬದ್ಧಗೊಳಿಸಲು ಈ ಈ ತೀರ್ಪನ್ನು ಬಳಸಲಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ, ಇದು ಬ್ಯಾಂಕ್‌ಗಳು, ಆಸ್ಪತ್ರೆಗಳು, ಸಾರ್ವಜನಿಕ ಸಾರಿಗೆ ಇತ್ಯಾದಿಗಳಲ್ಲಿ ಹಿಜಾಬ್ ಧರಿಸಿದ ಮಹಿಳೆಯರಿಗೆ ಜೊತೆಗೆ ಸಂಭವಿಸಲು ಆರಂಭಗೊಂಡಾಗ ಒಬ್ಬರು ಕೇವಲ ಅದನ್ನು ಆಶಿಸಬಹುದು ಮತ್ತು ನಿರಾಶರಾಗಬಹುದು' ಎಂದು ಹೇಳಿದ್ದಾರೆ.
ಇದನ್ನೂ ಓದಿ-ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು, ವಿದ್ಯೆಗಿಂತ ಯಾವುದು ಹೆಚ್ಚಲ್ಲ : ಸಿಎಂ
ಹಿಜಾಬ್ ಪ್ರಕರಣದಲ್ಲಿ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿರುವುದು ಇಲ್ಲಿ ಗಮನಾರ್ಹ. ಫೆಬ್ರವರಿ 5 ರ ಸರ್ಕಾರದ ಆದೇಶವನ್ನು ಅಮಾನ್ಯಗೊಳಿಸುವ ಯಾವುದೇ ಪ್ರಕರಣ ಇಲ್ಲಿ ನಿರ್ಮಾಣಗೊಳ್ಳುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಇದನ್ನೂ ಓದಿ-ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ : ಹೈಕೋರ್ಟ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.