ಶಬರಿಮಲೆ ವಿವಾದ: ದೆಹಲಿಯಲ್ಲಿ ಕರ್ನಾಟಕದ ಬಿಜೆಪಿ ಸಂಸದರಿಂದ ಪ್ರತಿಭಟನೆ

ಅಯ್ಯಪ್ಪನ ಸನ್ನಿಧಿಗೆ ಮಹಿಳೆಯರು ಪ್ರವೇಶಿಸಲು ಸರ್ಕಾರ ಅವಕಾಶ ಕಲ್ಪಿಸಿ, ಅಯ್ಯಪ್ಪ ಭಕ್ತರ ಮೇಲೆ ದೌರ್ಜನ್ಯ ಎಸಗುತ್ತಿದೆ ಎಂದು ಆರೋಪಿಸಿ ಕರ್ನಾಟಕದ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದರು.  

Last Updated : Jan 4, 2019, 05:34 PM IST
ಶಬರಿಮಲೆ ವಿವಾದ: ದೆಹಲಿಯಲ್ಲಿ ಕರ್ನಾಟಕದ ಬಿಜೆಪಿ ಸಂಸದರಿಂದ ಪ್ರತಿಭಟನೆ title=

ನವದೆಹಲಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರು ಪ್ರವೇಶಿಸಿದ್ದನ್ನು ವಿರೋಧಿಸಿ ದೇಶಾದ್ಯಂತ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಶುಕ್ರವಾರ ನವದೆಹಲಿಯ ಸಂಸತ್ತಿನ ಆವರಣದಲ್ಲಿ ಕರ್ನಾಟಕ ಮತ್ತು ಕೇರಳ ಸಂಸದರು ಕೇರಳ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ರಾಜೀನಾಮೆಗೆ ಆಗ್ರಹಿಸಿ ಕೇರಳ ಸಂಸದರು ಪ್ರತಿಭಟನೆ ನಡೆಸಿದರೆ, ಕೇರಳದ ಸಿಪಿಎಂ ಸರ್ಕಾರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದಿದೆ. ಅಯ್ಯಪ್ಪನ ಸನ್ನಿಧಿಗೆ ಮಹಿಳೆಯರು ಪ್ರವೇಶಿಸಲು ಸರ್ಕಾರ ಅವಕಾಶ ಕಲ್ಪಿಸಿಕೊಟ್ಟಿದೆ. ಈ ಮೂಲಕ ಅಯ್ಯಪ್ಪ ಭಕ್ತರ ಮೇಲೆ ದೌರ್ಜನ್ಯ ಎಸಗುತ್ತಿದೆ ಎಂದು ಆರೋಪಿಸಿ ಕರ್ನಾಟಕದ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದರು.  

ಪ್ರತಿಭಟನೆಯಲ್ಲಿ ಕರ್ನಾಟಕ ಸಂಸದರಾದ ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್, ಸಂಗಣ್ಣ ಕರಡಿ, ವಿ.ಮುರಳೀಧರನ್, ನಳಿನ್ ಕುಮಾರ್ ಕಟೀಲು, ರಾಜೀವ್ ಚಂದ್ರಶೇಖರ್, ಭಗವಂತ್ ಖೂಬಾ, ಗದ್ದೀಗೌಡರ್ ಸೇರಿದಂತೆ ಅನೇಕ ಕೇರಳ ಸಂಸದರು ಭಾಗವಹಿಸಿದ್ದರು.
 

Trending News