Rain Alert: ಜು.10ರವರೆಗೆ ಈ ಜಿಲ್ಲೆಗಳಲ್ಲಿ ವರುಣಾರ್ಭಟ: ಈ ಭಾಗದ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ!

Karnataka Rain Alert: ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ಇತರ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

Written by - Bhavishya Shetty | Last Updated : Jul 8, 2023, 01:14 PM IST
    • ಸೋಮವಾರದವರೆಗೆ ಈ ಪ್ರದೇಶದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
    • ಶುಕ್ರವಾರ ಅತಿ ಹೆಚ್ಚು ಮಳೆಯಾಗಿದೆ ಎಂದು ಐಎಂಡಿ ತನ್ನ ದೈನಂದಿನ ಬುಲೆಟಿನ್‌ ನಲ್ಲಿ ತಿಳಿಸಿದೆ
    • ಕರ್ನಾಟಕದ ಕರಾವಳಿ ಮತ್ತು ಇತರ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ
Rain Alert: ಜು.10ರವರೆಗೆ ಈ ಜಿಲ್ಲೆಗಳಲ್ಲಿ ವರುಣಾರ್ಭಟ: ಈ ಭಾಗದ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ!  title=
Karnataka Rain Alert

Karnataka Rain Alert 08-07-2023: ಕರ್ನಾಟಕದ ಕರಾವಳಿ ಭಾಗಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಗಳ ಪ್ರಕಾರ, ಸೋಮವಾರದವರೆಗೆ ಈ ಪ್ರದೇಶದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಮಂಕಿ, ಉಪ್ಪಿನಂಗಡಿ, ಕದ್ರಾ, ಸುಳ್ಯ, ಪುತ್ತೂರು, ಮಾಣಿ, ಪಣಂಬೂರು, ಮಂಗಳೂರು ಮತ್ತು ವಿರಾಜಪೇಟೆಯಲ್ಲಿ ಶುಕ್ರವಾರ ಅತಿ ಹೆಚ್ಚು ಮಳೆಯಾಗಿದೆ ಎಂದು ಐಎಂಡಿ ತನ್ನ ದೈನಂದಿನ ಬುಲೆಟಿನ್‌ ನಲ್ಲಿ ತಿಳಿಸಿದೆ.

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ಇತರ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಸೋಮವಾರದವರೆಗೆ ಕರಾವಳಿ ಪ್ರದೇಶಗಳು, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಧಾರವಾಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಇದನ್ನೂ ಓದಿ: IND vs WI ಟೆಸ್ಟ್ ಸರಣಿಗೆ ತಂಡ ಪ್ರಕಟ: ಕೊನೆಗೂ ಈ ಕಿಲಾಡಿ ಚಾಂಪಿಯನ್’ಗೆ ಮಣೆ ಹಾಕಿದ ಸಮಿತಿ!

ಗಾಳಿಯೂ ಸಹ ಪ್ರಬಲವಾಗಿರುವ ಸಾಧ್ಯತೆಯಿದೆ, ರಾಜ್ಯದ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಐಎಂಡಿ ಎಚ್ಚರಿಕೆ ನೀಡಿದೆ.

ಈ ಹಿಂದೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ "ಆರೆಂಜ್" ಅಲರ್ಟ್ ಮತ್ತು ಬೆಳಗಾವಿ, ಧಾರವಾಡ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ "ಹಳದಿ" ಅಲರ್ಟ್ ನೀಡಿಲಾಗಿತ್ತು.

ದಕ್ಷಿಣ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯು ಆಘಾತ ಸೃಷ್ಟಿಸಿದ್ದು, 6 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಭೂಕುಸಿತ ಘಟನೆಯಲ್ಲಿ 45 ವರ್ಷದ ವ್ಯಕ್ತಿ ಕೊಚ್ಚಿಕೊಂಡು ಹೋಗಿದ್ದರೆ, ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ವಾರದ ಆರಂಭದಲ್ಲಿ ಕರಾವಳಿ ಕರ್ನಾಟಕ ಭಾಗದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಮೂವರು ಸಾವನ್ನಪ್ಪಿದ್ದರು.

ಈ ಎಲ್ಲಾ ಘಟನೆಗಳ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಇಂತಹ ಅವಘಡಗಳನ್ನು ತಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕರ್ನಾಟಕದ ಸಚಿವರು ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಪಘಾತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ANI ತಿಳಿಸಿದೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ದುರಂತ ಪೀಡಿತ ಪ್ರದೇಶಗಳನ್ನು ಪರಿಶೀಲಿಸುವ ಸಾಧ್ಯತೆ ಇದೆ.

ವಿಮಾನಯಾನಕ್ಕೂ ಮಳೆ ಅಡ್ಡಿ: ಹವಾಮಾನ ವೈಪರೀತ್ಯದಿಂದಾಗಿ ಮುಂಬೈ ಹಾಗೂ ದುಬೈಯಿಂದ ಆಗಮಿಸಿರುವ ವಿಮಾನಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆ ತಡವಾಗಿ ಲ್ಯಾಂಡಿಂಗ್ ಆಗಿದೆ. ಜೊತೆಗೆ ಹೈದರಾಬಾದ್ ನಿಂದ ಆಗಮಿಸಿರುವ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ ಗೋವಾಕ್ಕೆ ತೆರಳಿ ಮತ್ತೆ ಹಿಂತಿರುಗಿ ಬಂದು ಲ್ಯಾಂಡ್ ಆಗಿದೆ. ಭಾರೀ ಮಳೆಯಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಮಳೆಗಾಲದಲ್ಲಿ ಇದು ಸಾಮಾನ್ಯ ಎಂದು ಏರ್ ಪೋರ್ಟ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಇನ್ನೇಕೆ 7 ಸೀಟರ್… ಬಂದೇಬಿಡ್ತು 10 ಸೀಟರ್ ಕಾರು: ಹಿಂದೆಂದೂ ಕಂಡಿರದ ಅದ್ಭುತ ಫೀಚರ್: ಬೆಲೆಯೂ ಭಾರೀ ಅಗ್ಗ!

ಸದ್ಯ ಕರಾವಳಿಯ ಅನೇಕ ಭಾಗಗಳಲ್ಲಿ ಮಳೆ ಕಾರಣದಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ನಾಳೆಯೂ ರಜೆ ಮುಂದುವರೆಯುವ ಸಾಧ್ಯತೆ ಇದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=38l6m8543Vk

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News