Karnataka Rain Update: ಬೆಂಗಳೂರಿನಲ್ಲಿ ಸೋಮವಾರ ಅಂದರೆ ಮೇ 2ರಂದು ಮಧ್ಯಾಹ್ನ 26.1 ಮಿ.ಮೀ.ನಷ್ಟು ಭಾರಿ ಮಳೆ ಸುರಿದಿತ್ತು. ಈ ವರ್ಷಧಾರೆ ಬಳಿಕ ಬಿಸಿಲಿನ ತಾಪಕ್ಕೆ ಕಂಗಾಲಾಗಿದ್ದ ಜನ ಕೊಂಚ ವಿರಾಮ ಪಡೆದಿದ್ದರು. ಸದ್ಯ ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಮೇ 5 ರವರೆಗೆ ಮಳೆಯಾಗುವ ಸಾಧ್ಯತೆಯಿದೆ.


COMMERCIAL BREAK
SCROLL TO CONTINUE READING

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದೆ.  ಸಂಜೆ ಮತ್ತು ರಾತ್ರಿ ಸಮಯದಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ ಎಂದು IMD ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: Sharad Pawar Resigns: ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ!


IMD ಪ್ರಕಾರ ಈಗ ಮಳೆಯಾಗಲು ಕಾರಣ, ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆಯಾಗಿರುವುದು. ಇನ್ನು ರಾಜಧಾನಿಯಲ್ಲಿ ಮಳೆಯ ಸಿಂಚನವಾಗಿದ್ದರೆ, ಸೋಮವಾರದಂದು ಕಾರವಾರದಲ್ಲಿ ರಾಜ್ಯದಲ್ಲಿಯೇ ಗರಿಷ್ಠ ತಾಪಮಾನ 37.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.


ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಂಗಳವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


5 ದಿನಗಳ ಹವಾಮಾನ ವರದಿ ಬಿಡುಗಡೆ:


ದೆಹಲಿ-ಎನ್‌ ಸಿ ಆರ್ ಸೇರಿದಂತೆ ಇಡೀ ಭಾರತದಲ್ಲಿ ಹವಾಮಾನ ಇತ್ತೀಚಿನ ದಿನಗಳಲ್ಲಿ ಬದಲಾವಣೆಯಾಗಿದೆ. ಪ್ರತಿ ವರ್ಷ ಮೇ ತಿಂಗಳಿನಲ್ಲಿ 40-45 ಡಿಗ್ರಿ ಸೆಲ್ಸಿಯಸ್‌ ವರೆಗೆ ಬಿಸಿಯಾಗಿರುತ್ತದೆ, ಆದರೆ ಈ ಬಾರಿ ತಾಪಮಾನವು ಅದರ ಅರ್ಧದಷ್ಟು ಕುಸಿದಿದೆ. ಮಳೆಯಿಂದಾಗಿ ಹಲವೆಡೆ ನೀರು ನಿಂತಿದ್ದು, ಕೆಲವೆಡೆ ಮರಗಳು ಧರೆಗುರುಳಿರುವ ಬಗ್ಗೆ ವರದಿಯಾಗಿದೆ. ಈಗ ಹವಾಮಾನ ಇಲಾಖೆಯು ಮುಂದಿನ 5 ದಿನಗಳ ಹವಾಮಾನ ವರದಿಯನ್ನು ಬಿಡುಗಡೆ ಮಾಡಿದೆ.


ಹವಾಮಾನ ಇಲಾಖೆ ಪ್ರಕಾರ ಈ ಹಿಂದೆ ಸಕ್ರಿಯವಾಗಿದ್ದ ವೆಸ್ಟರ್ನ್ ಡಿಸ್ಟರ್ಬನ್ಸ್ ಪರಿಣಾಮ ಇಂದಿಗೂ ಮುಂದುವರಿಯಲಿದೆ. ಇದರ ಪರಿಣಾಮದಿಂದಾಗಿ, ದೆಹಲಿ-ಎನ್‌ ಸಿ ಆರ್‌ ನ ಹಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಶುಕ್ರವಾರ ಮತ್ತೊಂದು ಹೊಸ ವೆಸ್ಟರ್ನ್ ಡಿಸ್ಟರ್ಬನ್ಸ್ ಉತ್ತರ ಭಾರತವನ್ನು ಪ್ರವೇಶಿಸುತ್ತಿದೆ. ಇದರ ಪರಿಣಾಮ ಶುಕ್ರವಾರದಿಂದ ಹೊಸ ಸುತ್ತಿನ ಮಳೆ ಆರಂಭವಾಗಲಿದೆ.


ಮಧ್ಯಂತರ ಮಳೆ ಮತ್ತು ನಿರಂತರ ಮೋಡ ಕವಿದ ಕಾರಣ, ಕಳೆದ ಮೂರು ದಿನಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕನಿಷ್ಠ 10 ಡಿಗ್ರಿ ಸೆಲ್ಸಿಯಸ್‌ ಗಿಂತ ಕಡಿಮೆಯಾಗಿದೆ ದೆಹಲಿಯಲ್ಲಿ ಭಾನುವಾರ ಗರಿಷ್ಠ ತಾಪಮಾನ 28.7 ಡಿಗ್ರಿ ಸೆಲ್ಸಿಯಸ್ ಮತ್ತು ಸೋಮವಾರ 26.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದರೊಂದಿಗೆ ಕಳೆದ 13 ವರ್ಷಗಳಲ್ಲಿ ಎರಡನೇ ಬಾರಿ ಮೇ ತಿಂಗಳಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಚಳಿ ದಾಖಲಾಗಿರುವುದು. ಮಂಗಳವಾರ ಗರಿಷ್ಠ ತಾಪಮಾನ 28.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.


ಹವಾಮಾನ ಇಲಾಖೆ ಪ್ರಕಾರ, ಮೇ 5 ರಿಂದ ಮತ್ತೊಂದು ಪಾಶ್ಚಿಮಾತ್ಯ ಅಡಚಣೆಯು ಸಕ್ರಿಯವಾಗಲಿದೆ. ಈ ಕಾರಣದಿಂದಾಗಿ, ದೆಹಲಿ-ಎನ್‌ ಸಿ ಆರ್ ನಲ್ಲಿ ಮೇ 7 ರವರೆಗೆ ಮೋಡ ಕವಿದಿರುವ ಸಾಧ್ಯತೆ ಇದೆ. ಈ ಕಾರಣದಿಂದಾಗಿ, ಮೇ 9 ರವರೆಗೆ ಗರಿಷ್ಠ ತಾಪಮಾನವು 35 ಡಿಗ್ರಿ ಸೆಲ್ಸಿಯಸ್‌ ಗಿಂತ ಕಡಿಮೆ ಇರುತ್ತದೆ.


ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ ಹಿಮಾಲಯದಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಎತ್ತರದ ಪರ್ವತಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಿಮಪಾತವೂ ಸಂಭವಿಸಬಹುದು. ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ.


ಇದನ್ನೂ ಓದಿ: Cyberattack: ಸೈಬರ್ ದಾಳಿಗೆ ಮನನೊಂದು ಯುವತಿ ಆತ್ಮಹತ್ಯೆ..!


ಉತ್ತರ ಪ್ರದೇಶ, ಬಿಹಾರ, ಉತ್ತರ ಮತ್ತು ಪೂರ್ವ ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ, ತೆಲಂಗಾಣ, ಕೇರಳ, ದಕ್ಷಿಣ ಕರ್ನಾಟಕ ಮತ್ತು ಗುಜರಾತ್, ಹರಿಯಾಣ, ಪಂಜಾಬ್ ಮತ್ತು ದೆಹಲಿಯ ಉಳಿದ ಭಾಗಗಳಲ್ಲಿ = ಲಘು ಮಳೆಯಾಗಬಹುದು. ಸಿಕ್ಕಿಂ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ಕರಾವಳಿ ಆಂಧ್ರ ಪ್ರದೇಶದ ಕೆಲವು ಭಾಗಗಳು, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.