/kannada/photo-gallery/shukra-gochar-laxmi-narayana-yoga-bless-this-zodiac-signs-with-huge-wealth-and-success-221344 Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು 221344

ಬೆಂಗಳೂರು: ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನು ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲವೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ವಿವಾದ ವಿಚಾರವಾಗಿ ಶನಿವಾರ ಕನ್ನಡದಲ್ಲಿಯೇ ಟ್ವೀಟ್ ಮಾಡಿರುವ ಅವರು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

‘ಕರ್ನಾಟಕದ ಜನ ಸದಾ ಸಾಮಾಜಿಕ ನ್ಯಾಯ, ಮಹನೀಯರ ಏಕತೆ ಹಾಗೂ ಮಾನವತಾವಾದದ ತತ್ವಗಳನ್ನ ಪಾಲಿಸಿಕೊಂಡು ಬಂದಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್, ಬುದ್ಧ-ಬಸವಣ್ಣ, ನಾರಾಯಣ ಗುರು, ಕುವೆಂಪು ಮುಂತಾದ ಅನೇಕ ಮಹನೀಯರ ಜೀವನಕ್ಕೆ ಹಾಗೂ ಕರ್ನಾಟಕದ ಅಸ್ಮಿತೆಗೆ ವಿರುದ್ಧವಾದ ಸಂದೇಶಗಳನ್ನು ಪಠ್ಯ ಪುಸ್ತಕದ ಮೂಲಕ ಮಕ್ಕಳಿಗೆ ಕಲಿಸಲು ಬಿಜೆಪಿ ಹೊರಟಿದೆ’ ಎಂದು ರಾಹುಲ್ ಟೀಕಿಸಿದ್ದಾರೆ.

ಇದನ್ನೂ ಓದಿ: ಖರ್ಗೆ ಮೇಲುಗೈ ಆಗುತ್ತದೆಂಬ ಭಯದಿಂದ ಡಿಕೆಶಿ-ಸಿದ್ದರಾಮಯ್ಯರಿಂದ ಹೊಂದಾಣಿಕೆ ನಾಟಕ: ಬಿಜೆಪಿ

‘ಕರ್ನಾಟಕದ ಮಕ್ಕಳ ಭವಿಷ್ಯದ ನಿರ್ಧಾರವನ್ನು ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ. ಸಾಮಾಜಿಕ ನ್ಯಾಯ, ಪ್ರಾದೇಶಿಕತೆ ಮತ್ತು ಲಿಂಗ ಸಮಾನತೆ ಸಾರುವ ಪಾಠಗಳನ್ನು, ಲೇಖಕರನ್ನು ಹೊರಗಿಟ್ಟು ಮಕ್ಕಳಿಗೆ ಕೇಸರೀಕರಣದ ಪಾಠ ಹೇಳಲು ಹೊರಟಿರುವುದು ವೈವಿಧ್ಯತೆಯ ತೊಟ್ಟಿಲಾದ ಭಾರತಕ್ಕೆ ಮಾಡುವ ಅಪಮಾನ’ವೆಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

‘ರಾಜ್ಯದ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಎಲ್ಲರೂ ಒಂದಾಗಿ ಅದನ್ನು ಮೆಟ್ಟಿನಿಲ್ಲುತ್ತಾರೆ ಎನ್ನುವುದನ್ನು ಕನ್ನಡಿಗರು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ. ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನು ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ. ಕನ್ನಡದ ನಾಡು, ನುಡಿ ಮತ್ತು‌ ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ’ ಎಂದು ರಾಹುಲ್ ಹೇಳಿದ್ದಾರೆ.   

ಇದನ್ನೂ ಓದಿ: RSS ತಂಟೆಗೆ ಬರಬೇಡಿ…ಹುಷಾರ್! ಸಿದ್ದರಾಮಯ್ಯಗೆ ಈಶ್ವರಪ್ಪ ಖಡಕ್ ವಾರ್ನಿಂಗ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Section: 
English Title: 
Karnataka Textbook Revision Row: Rahul Gandi Slams BJP Government Through Kannada Twitt
News Source: 
Home Title: 

ಬಹುತ್ವಕ್ಕೆ ಮಾರಕವಾದ ಪಠ್ಯ ಹೇರಲು ಬಿಡುವುದಿಲ್ಲ: ಕನ್ನಡದಲ್ಲಿ ರಾಹುಲ್ ಗಾಂಧಿ ಟ್ವೀಟ್

ಬಹುತ್ವಕ್ಕೆ ಮಾರಕವಾದ ಪಠ್ಯ ಹೇರಲು ಬಿಡುವುದಿಲ್ಲ: ಕನ್ನಡದಲ್ಲಿ ರಾಹುಲ್ ಗಾಂಧಿ ಟ್ವೀಟ್
Caption: 
ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ
Yes
Is Blog?: 
No
Tags: 
Facebook Instant Article: 
Yes
Highlights: 

ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನು ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ

ಕರ್ನಾಟಕದ ಮಕ್ಕಳ ಭವಿಷ್ಯದ ನಿರ್ಧಾರವನ್ನು ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ

ಮಕ್ಕಳಿಗೆ ಕೇಸರೀಕರಣದ ಪಾಠ ಹೇಳಲು ಹೊರಟಿರುವುದು ಭಾರತಕ್ಕೆ ಮಾಡುವ ಅಪಮಾನ

Mobile Title: 
ಬಹುತ್ವಕ್ಕೆ ಮಾರಕವಾದ ಪಠ್ಯ ಹೇರಲು ಬಿಡುವುದಿಲ್ಲ: ಕನ್ನಡದಲ್ಲಿ ರಾಹುಲ್ ಗಾಂಧಿ ಟ್ವೀಟ್
Zee Kannada News Desk
Publish Later: 
No
Publish At: 
Saturday, June 4, 2022 - 16:39
Created By: 
Puttaraj K Alur
Updated By: 
Puttaraj K Alur
Published By: 
Puttaraj K Alur
Request Count: 
1
Is Breaking News: 
No