ಬೆಂಗಳೂರು: ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನು ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲವೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ವಿವಾದ ವಿಚಾರವಾಗಿ ಶನಿವಾರ ಕನ್ನಡದಲ್ಲಿಯೇ ಟ್ವೀಟ್ ಮಾಡಿರುವ ಅವರು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.


COMMERCIAL BREAK
SCROLL TO CONTINUE READING

‘ಕರ್ನಾಟಕದ ಜನ ಸದಾ ಸಾಮಾಜಿಕ ನ್ಯಾಯ, ಮಹನೀಯರ ಏಕತೆ ಹಾಗೂ ಮಾನವತಾವಾದದ ತತ್ವಗಳನ್ನ ಪಾಲಿಸಿಕೊಂಡು ಬಂದಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್, ಬುದ್ಧ-ಬಸವಣ್ಣ, ನಾರಾಯಣ ಗುರು, ಕುವೆಂಪು ಮುಂತಾದ ಅನೇಕ ಮಹನೀಯರ ಜೀವನಕ್ಕೆ ಹಾಗೂ ಕರ್ನಾಟಕದ ಅಸ್ಮಿತೆಗೆ ವಿರುದ್ಧವಾದ ಸಂದೇಶಗಳನ್ನು ಪಠ್ಯ ಪುಸ್ತಕದ ಮೂಲಕ ಮಕ್ಕಳಿಗೆ ಕಲಿಸಲು ಬಿಜೆಪಿ ಹೊರಟಿದೆ’ ಎಂದು ರಾಹುಲ್ ಟೀಕಿಸಿದ್ದಾರೆ.


ಖರ್ಗೆ ಮೇಲುಗೈ ಆಗುತ್ತದೆಂಬ ಭಯದಿಂದ ಡಿಕೆಶಿ-ಸಿದ್ದರಾಮಯ್ಯರಿಂದ ಹೊಂದಾಣಿಕೆ ನಾಟಕ: ಬಿಜೆಪಿ


‘ಕರ್ನಾಟಕದ ಮಕ್ಕಳ ಭವಿಷ್ಯದ ನಿರ್ಧಾರವನ್ನು ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ. ಸಾಮಾಜಿಕ ನ್ಯಾಯ, ಪ್ರಾದೇಶಿಕತೆ ಮತ್ತು ಲಿಂಗ ಸಮಾನತೆ ಸಾರುವ ಪಾಠಗಳನ್ನು, ಲೇಖಕರನ್ನು ಹೊರಗಿಟ್ಟು ಮಕ್ಕಳಿಗೆ ಕೇಸರೀಕರಣದ ಪಾಠ ಹೇಳಲು ಹೊರಟಿರುವುದು ವೈವಿಧ್ಯತೆಯ ತೊಟ್ಟಿಲಾದ ಭಾರತಕ್ಕೆ ಮಾಡುವ ಅಪಮಾನ’ವೆಂದು ರಾಹುಲ್ ಟ್ವೀಟ್ ಮಾಡಿದ್ದಾರೆ.


ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ’ ಎಂದು ರಾಹುಲ್ ಹೇಳಿದ್ದಾರೆ.   


ಇದನ್ನೂ ಓದಿ: RSS ತಂಟೆಗೆ ಬರಬೇಡಿ…ಹುಷಾರ್! ಸಿದ್ದರಾಮಯ್ಯಗೆ ಈಶ್ವರಪ್ಪ ಖಡಕ್ ವಾರ್ನಿಂಗ್


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.