Karnataka Weather Update 6-5-2023: ಮುಂದಿನ 4 ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ದೇಶದಾದ್ಯಂತ ಬಿಸಿಲಿನ ತಾಪ ಕಡಿಮೆಯಾಗಲಿದ್ದು, ಮುಂದಿನ 4 ದಿನಗಳವರೆಗೆ ಮಳೆಯ ಸಿಂಚನವಾಗಲಿದೆ ಎಂದು ಹೇಳಲಾಗುತ್ತಿದೆ. ಮೇ 7 ರಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಹಾಗೂ ದಕ್ಷಿಣ ಒಳನಾಡಿನ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ.


COMMERCIAL BREAK
SCROLL TO CONTINUE READING

ಮೇ 7 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ತಿಳಿಸಿದೆ. ಹವಾಮಾನ ಇಲಾಖೆಯ ಪ್ರಕಾರ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿಯೂ ಸಹ ಇಂದು ಮಿಂಚು ಮತ್ತು ಬಿರುಗಾಳಿಯ ಜೊತೆ ಆಲಿಕಲ್ಲು ಮಳೆಯಾಗಲಿದೆ ಎಂದು ವರದಿ ಹೇಳಿದೆ.


ಇದನ್ನೂ ಓದಿ: ಚಿನ್ನ ಬೆಳ್ಳಿ ಎರಡರ ಬೆಲೆಯಲ್ಲಿಯೂ ಭರ್ಜರಿ ಏರಿಕೆ ! ಇನ್ನು ಕನಸಾಗಿಯೇ ಉಳಿಯಲಿದೆ ಬಂಗಾರದ ಖರೀದಿ


ಆಗ್ನೇಯ ಬಂಗಾಳ ಕೊಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮುದ್ರದಲ್ಲಿ ಮುಂದಿನ 3 ದಿನಗಳ ಕಾಲ 60 ಕಿಮೀ ವೇಗದಲ್ಲಿ ಗಾಳಿ ಬೀಸುವ ವಾತಾವರಣ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ IMD ಸೂಚಿಸಿದೆ.


ಕರ್ನಾಟಕದಲ್ಲಿ ಹವಾಮಾನ ಹೇಗಿರಲಿದೆ?


ಕಳೆದ ಕೆಲ ದಿನಗಳಿಂದ ಕರ್ನಾಟಕದ ದಕ್ಷಿಣ ಭಾಗಗಳಲ್ಲಿ ಮಳೆರಾಯ ತಂಪೆರೆದಿದ್ದಾನೆ. ಇಂದೂ ಕೂಡ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿದುಬಂದಿದೆ. ಉತ್ತರ ಕನ್ನಡ ಭಾಗಗಳಲ್ಲೂ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಬಾಗಲಕೋಟೆ, ಬೀದರ್‌, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾದರೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರಿನಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆಯಾಗಲಿದೆ. ಯಾದಗಿರಿ, ಕೊಪ್ಪಳದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ವರದಿ ಹೇಳಿದೆ.


ಇನ್ನುಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಗಳಲ್ಲಿ ಮಿಂಚು ಸಹಿತ ಹಗುರ ಸಾಧಾರಣ ಮಳೆಯಾಗಲಿದೆ.


ದೇಶದಲ್ಲಿ ಹೀಗಿರಲಿದೆ ಹವಾಮಾನ:


ಈ ವರ್ಷ ಹವಾಮಾನವು ನಿರಂತರ ಏರಿಳಿತಗಳಿಗೆ ಸಾಕ್ಷಿಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವ ಒಂದೆಡೆ ಹೆಚ್ಚಾಗುತ್ತಿದೆ. ಹವಾಮಾನ ಇಲಾಖೆಯ ಪ್ರಕಾರ, ಮೇ 5 ರಂದು, ದಕ್ಷಿಣ ಅಂಡಮಾನ್ ಸಮುದ್ರದ ಮೇಲೆ ವ್ಯಾಪಕವಾದ ಚಂಡಮಾರುತದ ಪರಿಚಲನೆಯು ರೂಪುಗೊಂಡಿದೆ. ಮೇ 6-7 ರಂದು ಇದರ ಪರಿಣಾಮ ಗೋಚರಿಸಲಿದೆ.


ಹವಾಮಾನ ಇಲಾಖೆ ಪ್ರಕಾರ, ಸೈಕ್ಲೋನಿಕ್ ಚಂಡಮಾರುತವು ಮೇ 8 ರ ರಾತ್ರಿ ಪೂರ್ಣ ರೂಪದಲ್ಲಿ ಪ್ರಭಾವ ಬೀರುವ ಎಲ್ಲಾ ಲಕ್ಷಣಗಳಿವೆ. ಈ ಚಂಡಮಾರುತವು ಯಾವ ದಿಕ್ಕಿನಲ್ಲಿ ಚಲಿಸುತ್ತದೆ ಮತ್ತು ಅದರ ವೇಗ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೇ 7ರಂದು ಒಂದಷ್ಟು ಮಾಹಿತಿ ಸಿಗಬಹುದು ಎಂದು ಅಂದಾಜಿಸಲಾಗಿದೆ. ಈ ಮಾಹಿತಿ ಸಿಕ್ಕ ಬಳಿಕವಷ್ಟೇ ಚಂಡಮಾರುತ ಎದುರಿಸಲು ಎಚ್ಚರಿಕೆ ನೀಡಲಾಗುವುದು. ಈ ಕಾರಣದಿಂದಾಗಿಯೇ ದೇಶದ ಪೂರ್ವ ರಾಜ್ಯಗಳು, ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.


ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ವಿದರ್ಭ, ಮಧ್ಯ ಮಹಾರಾಷ್ಟ್ರ, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ಒಡಿಶಾ, ಜಾರ್ಖಂಡ್, ಬಿಹಾರದಲ್ಲಿ ಲಘು ಮಳೆಯಾಗಿದೆ. ಪಶ್ಚಿಮ ಬಂಗಾಳ, ಛತ್ತೀಸ್‌ ಗಢ, ಮಧ್ಯಪ್ರದೇಶ, ಮರಾಠವಾಡ, ದಕ್ಷಿಣ ಕರ್ನಾಟಕ, ಉತ್ತರ ಪಂಜಾಬ್, ಸಿಕ್ಕಿಂ, ಸೌರಾಷ್ಟ್ರ ಮತ್ತು ಕಚ್‌ ನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ.


ಇದನ್ನೂ ಓದಿ: Weight Loss: ತೂಕ ಇಳಿಕೆಗೆ ಈ ರೀತಿ ಸೋರೆಕಾಯಿಯನ್ನು ಸೇವಿಸಿ!


ಮುಂದಿನ 24 ಗಂಟೆಗಳ ಕಾಲ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದಲ್ಲಿ ದಿನದ ತಾಪಮಾನವು ಕ್ರಮೇಣ ಹೆಚ್ಚಾಗಬಹುದು. ಪಂಜಾಬ್, ಹರಿಯಾಣ, ಛತ್ತೀಸ್‌ ಗಢ, ಒಡಿಶಾ, ಪಶ್ಚಿಮ ಬಂಗಾಳ, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಲಘು ಮಳೆಯಾಗಬಹುದು. ಈಶಾನ್ಯ ಭಾರತ, ಸಿಕ್ಕಿಂ, ಆಂಧ್ರಪ್ರದೇಶದ ಕೆಲವು ಭಾಗಗಳು, ತೆಲಂಗಾಣ, ಮಧ್ಯ ಮಹಾರಾಷ್ಟ್ರ, ತಮಿಳುನಾಡು ಮತ್ತು ದಕ್ಷಿಣ ಕರ್ನಾಟಕದಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗಬಹುದು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.