ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ನಿಧನಕ್ಕೆ ಸಂತಾಪ ಸೂಚಿಸಿರುವ ರಾಜ್ಯ ಸರ್ಕಾರ ಒಂದು ದಿನ ಶೋಕಾಚರಣೆ ನಡೆಸಲು ನಿರ್ಧರಿಸಿದೆ. 


COMMERCIAL BREAK
SCROLL TO CONTINUE READING

ವಯೋಸಹಜ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಪಕ್ಷದ ಅಧಿನಾಯಕ ಎಂ. ಕರುಣಾನಿಧಿ ತಮ್ಮ 94ನೇ ವಯಸ್ಸಿನಲ್ಲಿ ಮಂಗಳವಾರ ಸಂಜೆ ಇಹಲೋಕ ತ್ಯಜಿಸಿದರು. ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಂತರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಈ ನಿರ್ಧಾರ ಘೋಷಿಸಿದ್ದಾರೆ.  


ಬದುಕಿರುವಾಗಲೇ ದಂತಕಥೆಯಂತಿದ್ದ ಎಂ. ಕರುಣಾನಿಧಿ ಅವರ ನಿಧನದಿಂದ ನನಗೆ ಆಘಾತವಾಗಿದೆ. ತಮ್ಮ ಜೀವಿತಾವಧಿ ಪೂರ್ಣ ತಮಿಳುನಾಡಿನ ಅಭಿವೃದ್ಧಿಗೆ ಶ್ರಮಿಸಿದ ಕರುಣಾನಿಧಿ ಅವರು ಪ್ರಾದೆಶಿಅಕ ಪಕ್ಷವನ್ನು ಸದೃಢಗೊಳಿಸುವಲ್ಲಿ ಪ್ರದರ್ಶಿಸಿದ ಮುತ್ಸದ್ದಿತನ ವೈಶಿಷ್ಟ್ಯಪೂರ್ಣ. ಹಲವು ಬಾರಿ ಶ್ರೀ ಕರುಣಾನಿಧಿ ಅವರನ್ನು ಭೇಟಿ ಮಾಡಿದ್ದೇ. ಪ್ರಾದೇಶಿಕ ಪಕ್ಷಗಳ ಮಹತ್ವವನ್ನು ಪ್ರತಿ ಬಾರಿಯೂ ನನಗೆ ಮನವರಿಕೆ ಮಾಡಿಕೊಡುತ್ತಿದ್ದರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.


ಐದು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದ ಎಂ. ಕರುಣಾನಿಧಿ ಅವರು ಅಸಂಖ್ಯಾತ ಅಭಿಮಾನಿ ಬಳಗವನ್ನು ಹೊಂದಿದ್ದರು. ಪ್ರತಿ ಬಾರಿ ಸ್ಪರ್ಧಿಸಿದಾಗಲೂ ಗೆಲುವಿನ ನಗೆ ಬೀರಿದ್ದ ಕರುಣಾನಿಧಿ ಅವರನ್ನು ಅವರ ಅಭಿಮಾನಿಗಳು 'ಸೋಲಿಲ್ಲದ ಸರದಾರ' ಎಂದೇ ಕರೆಯುತ್ತಾರೆ.