ಚೆನ್ನೈ: ಡಿಎಂಕೆ ವರಿಷ್ಠ ಎಂ.ಕರುಣಾನಿಧಿಯವರ ಸಾವಿನಿಂದ ಅವರ ಬೆಂಬಲಿಗರ ಆಕ್ರಂದನಮುಗಿಲುಮುಟ್ಟಿದ್ದು, ತಮಿಳುನಾಡಿನಾದ್ಯಂತ ಏಳುದಿನ ಶೋಕಾಚರಣೆಗೆ ತಮಿಳುನಾಡು ಸರಕಾರ ಘೋಷಿಸಿದೆ. ಸದ್ಯ ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ಚೆನ್ನೈನ ಗೋಪಾಲಪುರಂನಲ್ಲಿರುವ ಅವರ ನಿವಾಸಕ್ಕೆ ರವಾನೆ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ನಾಳೆ ಬೆಳಗ್ಗೆಯಿಂದಲೇ ರಾಜಾಜಿ ಹಾಲ್​ನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು ಸಕಲ ಸಿದ್ಧತೆಗಳೂ ನಡೆಯುತ್ತಿವೆ. ಕರುಣಾನಿಧಿಯವರ ಅಂತಿಮ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಚೆನ್ನೈಗೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಎಂ.ಕರುಣಾನಿಧಿ: ದಕ್ಷಿಣಾಮೂರ್ತಿಯಿಂದ ಕಲೈಗ್ನಾರ್ ವರೆಗೆ...


ಶಾಲಾ ಕಾಲೇಜು, ಕಚೇರಿಗಳಿಗೆ ರಜೆ
ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ನಾಯಕ ಎಂ.ಕರುಣಾನಿಧಿ ನಿಧನದ ಹಿನ್ನೆಲೆಯಲ್ಲಿ ಬುಧವಾರ ತಮಿಳುನಾಡಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ, ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೋಲಿಸ್ ಬಿಗಿ ಭದ್ರತೆ ಒದಗಿಸಲಾಗಿದೆ. 


ಕರ್ನಾಟಕ, ತಮಿಳುನಾಡು ಗಡಿ ಭಾಗದಲ್ಲಿ ಪೊಲೀಸ್​ ಹೈ ಅಲರ್ಟ್
ಅನಿರೀಕ್ಷಿತ ಘಟನೆಗಳನ್ನು ನಡೆಯಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ತಮಿಳುನಾಡು ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಕರ್ನಾಟಕದಿಂದ ತಮಿಳುನಾಡಿಗೆ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಗಳು ಮತ್ತು ಖಾಸಗಿ ಬಸ್ ಸಂಚಾರವನ್ನು ನಿಷೇಧಿಸಲಾಗಿದೆ. 


ತಮಿಳುನಾಡು ಡಿಎಂಕೆ ಅಧಿನಾಯಕ, ಕಲೈಗ್ನಾರ್ ಎಂ.ಕರುಣಾನಿಧಿ ಇನ್ನಿಲ್ಲ


ಎಂ.ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಂಗಳವಾರ ಮಧ್ಯಾಹ್ನ ಪ್ರಕಟಣೆ ಹೊರಡಿಸಿದ್ದ ಕಾವೇರಿ ಆಸ್ಪತ್ರೆ ಆಡಳಿತ ಮಂಡಳಿ, "ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿರುವ 94 ವರ್ಷದ ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ತಜ್ಞ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದರೂ, ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ" ಎಂದು ತಿಳಿಸಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಸಂಜೆ 6.10ಕ್ಕೆ ಎಂ.ಕರುಣಾನಿಧಿ ನಿಧನರಾದರು.


ಬಡವರ ಕಲ್ಯಾಣಕ್ಕಾಗಿಯೇ ಕರುಣಾನಿಧಿ ಜೀವನ ಮುಡಿಪಾಗಿಟ್ಟಿದ್ದರು: ಪ್ರಧಾನಿ ಮೋದಿ


ಧೀಮಂತ ರಾಜಕಾರಣಿ ಎಂ.ಕರುಣಾನಿಧಿ ಅವರ ನಿಧಾನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೇರಿದಂತೆ ಹಲವರು ಗಣ್ಯರು ಸಂತಾಪ ಸೂಚಿಸಿದ್ದಾರೆ.