ನವದೆಹಲಿ: ಕಳೆದ ವರ್ಷ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕಥುವಾ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬೆಳಿಗ್ಗೆ ತೀರ್ಪು ಪ್ರಕಟಿಸಿದ್ದ ಪಠಾಣ್ ಕೋಟ್ ನ್ಯಾಯಾಲಯ ಇದೀಗ ಶಿಕ್ಷೆಯನ್ನೂ ಪ್ರಕಟಿಸಿದೆ. ಪ್ರಕರಣದಲ್ಲಿ ಆರು ಮಂದಿಯನ್ನು ದೋಷಿಗಳೆಂದು ತೀರ್ಪು ನೀಡಿದ್ದ ಪಠಾಣ್ ಕೋಟ್ ನ್ಯಾಯಾಲಯ ಮೂರು ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಉಳಿದ ಮೂವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ. 


COMMERCIAL BREAK
SCROLL TO CONTINUE READING

ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೂವರು ಪ್ರಮುಖ ಅಪರಾಧಿಗಳಾದ ಸಂಜೀ ರಾಮ್, ದೀಪಕ್ ಖಜುರಿಯಾ ಮತ್ತು ಪ್ರವೇಶ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ಪ್ರಕರಣದ ಇನ್ನುಳಿದ ಅಪರಾಧಿಗಳಾದ  ಸುರೇಂದರ್ ವರ್ಮಾ, ಆನಂದ್ ದತ್ತ ಮತ್ತು ತಿಲಕ್ ರಾಜ್ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.


ಕಳೆದ ವರ್ಷ ಜನವರಿಯಲ್ಲಿ ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಗೆ ಮತ್ತು ಬರುವ ಔಷಧಿ ನೀಡಿ ಹಲವು ದಿನಗಳ ವರೆಗೆ ಆಕೆಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿತ್ತು. 2018ರ ಎಪ್ರಿಲ್ ನಲ್ಲಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಕಳೆದ ಜೂನ್ 3 ರಂದು ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ ಜೂನ್ 10ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿತ್ತು.