ಲಕ್ನೋ :  Kisan Credit Card:ಕಿಸಾನ್ ಕ್ರೆಡಿಟ್ ಕಾರ್ಡ್‌ ಎಲ್ಲರಿಗೂ ಲಭ್ಯವಾಗುವಂತೆ ಮಾಡಲು ಉತ್ತರ ಪ್ರದೇಶ (Uttar Pradesh) ಸರ್ಕಾರ ಅಭಿಯಾನವನ್ನು ಆರಂಭಿಸಿದೆ.  ಪಿಎಂ-ಕಿಸಾನ್ ಸಮ್ಮನ್ ನಿಧಿ  (PM-Kisan Samman Nidhi)  ಅಡಿಯಲ್ಲಿ ನೋಂದಾಯಿಸಲ್ಪಟ್ಟ ಪ್ರತಿಯೊಬ್ಬ ರೈತನನ್ನು ಕಿಸಾನ್ ಕ್ರೆಡಿಟ್ ಕಾರ್ಡ್ ಅಡಿಯಲ್ಲಿ ತರಲು ವಿಶೇಷ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಏಪ್ರಿಲ್ 15 ರವರೆಗೆ ಪ್ರಚಾರ ಮಾಡುವ ಮೂಲಕ ರಾಜ್ಯದ ಪ್ರಧಾನ್ ಮಂತ್ರಿ ಕಿಸಾನ್ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ (KCC) ನೀಡುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಪ್ರಧಾನ್ ಮಂತ್ರಿ ಕಿಸಾನ್ ಯೋಜನೆಯ ಸಣ್ಣ ಹಿಡುವಳಿ ಹೊಂದಿರುವ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ಮಾಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಸೂಚನೆ ನೀಡಿದ್ದಾರೆ.


ಕರೋನಾ ಬಿಕ್ಕಟ್ಟಿನಿಂದಾಗಿ ಪ್ರಧಾನ್ ಮಂತ್ರಿ ಕಿಸಾನ್ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಕಳೆದ ವರ್ಷ ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) ನೀಡಲು ಸಾಧ್ಯವಾಗಲಿಲ್ಲ. ಇದೀಗ ಪ್ರತಿ ಹಳ್ಳಿಯಲ್ಲೂ ಅಭಿಯಾನವನ್ನು ನಡೆಸುವ ಮೂಲಕ ರೈತರ ಕ್ರೆಡಿಟ್ ಕಾರ್ಡ್ ತಯಾರಿಸಲಾಗುತ್ತಿದೆ  ಎಂದು ಯೋಗಿ ಸರ್ಕಾರ ತಿಳಿಸಿದೆ.


ಇದನ್ನೂ ಓದಿ - PM Kisan nidhi status: ನಿಮ್ಮ ಖಾತೆಗೆ ಹಣ ಇನ್ನೂ ಬಂದಿಲ್ಲವೇ, ತಕ್ಷಣ ಹೀಗೆ ಮಾಡಿ


ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕೃಷಿ) ಎಲ್ಲಾ ಜಿಲ್ಲಾಧಿಕಾರಿಗಳು, ಮುಖ್ಯ ಅಭಿವೃದ್ಧಿ ಅಧಿಕಾರಿಗಳು ಮತ್ತು ಕೃಷಿ ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದು, ಇದರಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಪ್ರಧಾನ್ ಮಂತ್ರಿ ಕಿಸಾನ್ ಯೋಜನೆಯ ಎಲ್ಲಾ ಫಲಾನುಭವಿಗಳ ಶೇಕಡಾ 100 ರಷ್ಟು ಪರಿಶೀಲನೆ ಮಾಡಿ ಎಲ್ಲ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವಂತೆ ನಿರ್ದೇಶನ ನೀಡಿದ್ದಾರೆ.


ಶೀಘ್ರದಲ್ಲೇ ಪಿಎಂ-ಕಿಸಾನ್ (PM Kisan) ಯೋಜನೆಯ 8 ನೇ ಕಂತು ಬಿಡುಗಡೆ:
ಕೇಂದ್ರ ಸರ್ಕಾರ ಪಿಎಂ ಕಿಸಾನ್ (PM Kisan) ಸಮ್ಮನ್ ನಿಧಿಯ 8 ನೇ ಕಂತನ್ನು ಶೀಘ್ರದಲ್ಲೇ ರೈತರ ಖಾತೆಗೆ  ಬಿಡುಗಡೆ ಮಾಡಲಿದೆ.  8 ನೇ ಕಂತು ಹೋಳಿ ಹಬ್ಬದ ಸನಿಹದಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ - Karnataka Budget 2021: ರೈತ ನಾಯಕ ಎಂದು ಹೇಳಿಕೊಳ್ಳುವ ಯಡಿಯೂರಪ್ಪ ಬಜೆಟ್‌ನಲ್ಲಿ ರೈತರಿಗೆ ಕೊಟ್ಟಿದ್ದೇನು?


ಇದಕ್ಕೊ ಮೊದಲು 7 ನೇ ಕಂತು 2020 ರ ಡಿಸೆಂಬರ್ 25 ರಂದು ಬಿಡುಗಡೆಯಾಯಿತು. ಈ ಸಮಯದಲ್ಲಿ 9 ಕೋಟಿ ರೈತರ ಖಾತೆಗಳಿಗೆ 18,000 ಕೋಟಿ ರೂ. ರವಾನಿಸಲಾಗಿದೆ.


ಪಿಎಂ-ಕಿಸಾನ್ ಸಹಾಯವಾಣಿ :
ನೀವು PM-Kisan ನ ಕಂತು ಸ್ವೀಕರಿಸದಿದ್ದರೆ, ನೀವು 011-24300606 ಸಹಾಯವಾಣಿ ಸಂಖ್ಯೆಗೆ (PM-Kisan Helpline) ಕರೆ ಮಾಡುವ ಮೂಲಕ ನಿಮ್ಮ ಪಿಎಂ ಕಿಸಾನ್ ಖಾತೆಗೆ ಸಂಬಂಧಿಸಿದ ಮಾಹಿತಿ ಪಡೆಯಬಹುದಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.