ನವದೆಹಲಿ: ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರನ್ನು ವಜಾಗೊಳಿಸುವಂತೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾಗೆ ಒತ್ತಾಯಿಸಿದ್ದಾರೆ.


COMMERCIAL BREAK
SCROLL TO CONTINUE READING

'ನಿಮ್ಮ ಪಕ್ಷದ ಮುಖ್ಯಮಂತ್ರಿಯೊಬ್ಬರು ಸಂಸದರನ್ನು ಅವರ ತಂದೆ ಯಾರೆಂದು ಪ್ರಶ್ನಿಸುತ್ತಾರೆ, ಇದು ನಮ್ಮ 'ಸಂಸ್ಕಾರನಾ ? ಎಂದು ಚಂದ್ರಶೇಖರ ರಾವ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ-#JamesTeaser: ದೊಡ್ಮನೆ ಅಭಿಮಾನಿಗಳಿಗೆ ಬಿಗ್ ಗಿಫ್ಟ್; ಬಹುನಿರೀಕ್ಷಿತ 'ಜೇಮ್ಸ್' ಚಿತ್ರದ ಟೀಸರ್ ರಿಲೀಸ್


ಶುಕ್ರವಾರದಂದು ಉತ್ತರಾಖಂಡ್‌ನಲ್ಲಿ ನಡೆದ ಚುನಾವಣೆಯ ರ್ಯಾಲಿಯಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರು ಸೆಪ್ಟೆಂಬರ್ 2016 ರ ಸರ್ಜಿಕಲ್ ಸ್ಟ್ರೈಕ್‌ನ ಪುರಾವೆಗಳನ್ನು ಕೋರಿದ್ದಕ್ಕಾಗಿ ಮತ್ತು ಕೋವಿಡ್ ವಿರೋಧಿ ಲಸಿಕೆಗಳ ಪರಿಣಾಮಕಾರಿತ್ವವನ್ನು ಪ್ರಶ್ನಿಸಿದ್ದಕ್ಕಾಗಿ ರಾಹುಲ್ ಗಾಂಧಿಯ ವಿರುದ್ಧ ವಾಗ್ದಾಳಿ ನಡೆಸಿದರು.ರಾಹುಲ್ ಗಾಂಧಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ಬಿಜೆಪಿ ಎಂದಾದರೂ ಯಾವುದೇ ಪುರಾವೆಯನ್ನು ಕೇಳಿದೆಯೇ? ಎಂದು ಅಸ್ಸಾಂ ಮುಖ್ಯಮಂತ್ರಿ ಪ್ರಶ್ನಿಸಿದ್ದರು.


ರಾಯಗಿರಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ತೆಲಂಗಾಣ ಸಿಎಂಕೆ ಚಂದ್ರಶೇಖರ ರಾವ್, ಅಸ್ಸಾಂ ಮುಖ್ಯಮಂತ್ರಿಯನ್ನು ವಜಾಗೊಳಿಸುವಂತೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ಒತ್ತಾಯಿಸಿದರು.'ನೀವು ಅವರನ್ನು ವಜಾ ಮಾಡಿ.. ಒಬ್ಬ ಮುಖ್ಯಮಂತ್ರಿಯಾಗಿ ಈ ರೀತಿ ಮಾತನಾಡಬಹುದೇ? ಎಲ್ಲದಕ್ಕೂ ಮಿತಿಗಳಿವೆ. ನೀವು ಅಹಂಕಾರವೇ? ನೀವು ತಮಾಶಾ ಮಾಡುತ್ತೀರಾ? ಜನರು ಮೌನವಾಗಿರುತ್ತಾರೆ ಎಂದು ನೀವು ಭಾವಿಸುತ್ತೀದ್ದಿರಾ," ಎಂದು ಕೆಸಿಆರ್ ಪ್ರಶ್ನಿಸಿದರು.


ಇದು ಬಿಜೆಪಿಯ ಸಂಸ್ಕೃತಿಯೇ? ಇದು ಹಿಂದೂ ಧರ್ಮ ಮತ್ತು ಭಾರತೀಯ ಸಂಸ್ಕೃತಿಯೇ? ನಾನು ಭಾರತೀಯನಾಗಿ ಬೇಡಿಕೆ ಇಡುತ್ತಿದ್ದೇನೆ. ನಿಜಕ್ಕೂ ನನಗೆ ನಾಚಿಕೆಯಾಗುತ್ತಿದೆ. ಇದು ದೇಶಕ್ಕೆ ಒಳ್ಳೆಯದಲ್ಲ. ನಾವು ಕೈಮುಗಿದು ಸುಮ್ಮನಿರುತ್ತೇವೆ ಎಂದು ನೀವು ಭಾವಿಸುತ್ತೀರಾ? ”ಎಂದು ಅವರು ಪ್ರಶ್ನಿಸಿದರು.


ಏತನ್ಮಧ್ಯೆ, ಶರ್ಮಾ ಅವರನ್ನು ಖಂಡಿಸಿದ ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ನಿತೀಶ್ ಗೌರ್, "ಮುಖ್ಯಮಂತ್ರಿ ಅತ್ಯಂತ ಶೋಚನೀಯ ಹೇಳಿಕೆಗಳನ್ನು ನೀಡಿದ್ದಾರೆ. ಇದು ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮಾಡಿದ ಅವಮಾನವಾಗಿದೆ" ಎಂದು ಹೇಳಿದರು.


"ಇಂತಹ ಉನ್ನತ ಸ್ಥಾನದಲ್ಲಿ ಕುಳಿತಿರುವ ವ್ಯಕ್ತಿಗೆ ಇಂತಹ ಹೇಳಿಕೆ ನೀಡುವುದು ಸರಿಯಲ್ಲ.ಅಂತಹ ಹೇಳಿಕೆಗಳಿಗೆ ಅವರು ಸಾರ್ವಜನಿಕ ಕ್ಷಮೆಯಾಚಿಸಬೇಕು. ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು" ಎಂದು ಗೌರ್ ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.