ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವಧಿಗೂ ಮೊದಲೇ ಸರ್ಕಾರ ವಿಸರ್ಜಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ಆಪ್ತಮೂಲಗಳು ಹೇಳುತ್ತಿವೆ.


COMMERCIAL BREAK
SCROLL TO CONTINUE READING

ಈ ಹಿನ್ನಲೆಯಲ್ಲಿ ಈಗ ಟಿಆರ್ಎಸ್ ಪಕ್ಷ  ಭಾನುವಾರದಂದು  ಬೃಹತ್ ರ್ಯಾಲಿಯನ್ನು  ಹೈದರಾಬಾದ್ ನಲ್ಲಿ ಆಯೋಜಿಸಿದೆ ಎನ್ನಲಾಗಿದೆ.ಈ ಕುರಿತಾಗಿ ಇನ್ನು ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.ಆದರೆ ಮೂಲಗಳ ಪ್ರಕಾರ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಏಕಕಾಲಕ್ಕೆ ನಡೆದರೆ ಪಕ್ಷಕ್ಕೆ ಹಿನ್ನಡೆಯಾಗಲಿದೆ ಆದ್ದರಿಂದ ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಈ ಕ್ರಮಕ್ಕೆ  ಮುಂದಾಗಿದ್ದಾರೆ ಎನ್ನಲಾಗುತ್ತಿದೆ.


ಶುಕ್ರವಾರದಂದು ನಡೆದ ಸಭೆಯಲ್ಲಿ ಐಟಿ ಮಿನಿಸ್ಟರ್ ಕೆ.ಟಿ.ರಾಮರಾವ್  ಅವಧಿಪೂರ್ವ ಚುನಾವಣೆಯ ಬಗ್ಗೆ ಪ್ರಸ್ತಾಪಿಸಿದ್ದರು ಆದರೆ ಈ ಬಗ್ಗೆ ಇನ್ನು ಯಾವುದೇ ತಿರ್ಮಾನ ತೆಗೆದುಕೊಂಡಿಲ್ಲ ಎನ್ನಲಾಗಿದೆ.