ನವದೆಹಲಿ: ಕೇಂದ್ರೀಯ ವಿದ್ಯಾಲಯಗಳು ದೇಶದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಹೆಸರುವಾಸಿಯಾಗಿದೆ. ಆದರೆ ಈ ಶಾಲೆಗಳು ಪ್ರಸ್ತುತ ಶಿಕ್ಷಕರ ಕೊರತೆಯನ್ನು ಎದುರಿಸುತ್ತಿವೆ. ದೇಶಾದ್ಯಂತ ಕೇಂದ್ರೀಯ ವಿದ್ಯಾಲಯಗಳಲ್ಲಿ 5,949 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ತಿಳಿದುಬಂದಿದೆ.


COMMERCIAL BREAK
SCROLL TO CONTINUE READING

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಡಾ.ರಮೇಶ್ ಪೋಖ್ರಿಯಲ್ ನಿಶಾಂಕ್(Dr. Ramesh Pokhriyal Nishank) ಅವರು ಗುರುವಾರ (ನವೆಂಬರ್ 28) ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ.


ಪೋಖ್ರಿಯಾಲ್ ಅವರ ಪ್ರಕಾರ, ದೇಶಾದ್ಯಂತ ಕೇಂದ್ರಿಯ ವಿದ್ಯಾಲಯ(Kendriya Vidayalaya)ಗಳಿಗೆ ಒಟ್ಟು 48,236 ಶಿಕ್ಷಕರ ಹುದ್ದೆಗಳಿಗೆ ಅನುಮೋದನೆ ನೀಡಿದ್ದು, ಈ ಪೈಕಿ 5000 ಕ್ಕೂ ಹೆಚ್ಚು ಹುದ್ದೆಗಳನ್ನು ಇನ್ನೂ ಭರ್ತಿ ಮಾಡಬೇಕಿದೆ.


2014 ರಲ್ಲಿ ಮೋದಿ ಸರ್ಕಾರ ಅಧಿಕಾರ ವಹಿಸಿಕೊಂಡಾಗಿನಿಂದಲೂ, ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಕ್ಕೆ ಮನವಿ ಮಾಡಲಾಗಿದೆ. ಕಳೆದ 5 ವರ್ಷಗಳಲ್ಲಿ ಕೇಂದ್ರೀಯ ವಿದ್ಯಾಲಯಗಳಲ್ಲಿ ಸುಮಾರು 11,610 ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ಅಷ್ಟೇ ಅಲ್ಲದೆ ಪ್ರಸಕ್ತ ವರ್ಷ 2019 ರಲ್ಲಿ ಕೂಡ ಕೇಂದ್ರ ವಿದ್ಯಾಲಯದಲ್ಲಿ 8,420 ಶಿಕ್ಷಕರನ್ನು ನೇಮಿಸಲಾಗಿದೆ ಎಂದವರು ತಿಳಿಸಿದರು.


ಕಳೆದ 5 ವರ್ಷದಲ್ಲಿ ಕೇಂದ್ರೀಯ ವಿದ್ಯಾಲಯಗಳಲ್ಲಿ ನೇಮಕಾತಿ ಮಾಡಲಾದ ಶಿಕ್ಷಕರೆಷ್ಟು?


  • 2014- 3,625 ಶಿಕ್ಷಕರು

  • 2015- 763 ಶಿಕ್ಷಕರು

  • 2016- 421 ಶಿಕ್ಷಕರು

  • 2017- 6,255 ಶಿಕ್ಷಕರು

  • 2018- 546 ಶಿಕ್ಷಕರು

  • 2019 -8,420 ಶಿಕ್ಷಕರು