Couple arrested for selling rape visuals : 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಇನ್‌ಸ್ಟಾಗ್ರಾಂನಲ್ಲಿ ದೃಶ್ಯಾವಳಿಗಳನ್ನು ಮಾರಾಟ ಮಾಡಿದ್ದ ದಂಪತಿಯನ್ನು ಬಂಧಿಸಲಾಗಿದೆ. ಕೇರಳದ ಕುಳತುಪುಳ ಕಂಜಿರೋಟ್‌ನ ವಿಷ್ಣು (31) ಮತ್ತು ಅವರ ಪತ್ನಿ ಸ್ವೀಟಿ (20) ಬಂಧಿತರು. ಕೊಲ್ಲಂನ ಕುಲಾತುಪುಳದಲ್ಲಿ ಈ ಘಟನೆ ನಡೆದಿದೆ. 


COMMERCIAL BREAK
SCROLL TO CONTINUE READING

ಹೌದು.. ಟ್ಯೂಷನ್ ತೆಗೆದುಕೊಳ್ಳುವ ನೆಪದಲ್ಲಿ ವ್ಯಕ್ತಿಯೊಬ್ಬ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಅತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ದೃಶ್ಯಗಳನ್ನು ಅತನ ಪತ್ನಿ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ನಂತರ, ಅವರು ಆ ವೀಡಿಯೊಗಳನ್ನು ಇನ್‌ಸ್ಟಾಗ್ರಾಮ್‌ ಮೂಲಕ ಮಾರಾಟ ಮಾಡಿದರು.


ಇದನ್ನೂ ಓದಿ: ಮಣಿಪುರ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ದಾಖಲಿಸಿದ ಸಿಬಿಐ


ಅಲ್ಲದೆ, ಫೋಟೋಗೆ 50 ರಿಂದ 500 ರೂ. ವಿಡಿಯೋಗೆ ಆರೋಪಿಗಳು 1500 ರೂಪಾಯಿ ವಸೂಲಿ ಮಾಡಿದ್ದಾರೆ. ಮುಂಗಡವಾಗಿ ಹಣ ಪಡೆದ ನಂತರ, ಚಿತ್ರಗಳು ಮತ್ತು ವೀಡಿಯೊಗಳನ್ನು Instagram ಮೂಲಕ ಕಳುಹಿಸಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. 


ಆರೋಪಿಗಳನ್ನು ಹೊರತುಪಡಿಸಿ ಹಣ ಕೊಟ್ಟು ಚಿತ್ರಹಿಂಸೆಯ ದೃಶ್ಯಾವಳಿಗಳನ್ನು ಖರೀದಿಸಿದವರಿಗೂ ತನಿಖೆ ವಿಸ್ತರಿಸಲು ಪೊಲೀಸರು ನಿರ್ಧರಿಸಿದ್ದಾರೆ. ಈ ವರ್ಷದ ಆರಂಭದಿಂದಲೂ ಆರೋಪಿಗಳು ಬಾಲಕಿಗೆ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.