ಕೇರಳದಲ್ಲಿ ಭಾರೀ ಮಳೆ: ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ!

ನೈರುತ್ಯ ಮಾನ್ಸೂನ್ ಪ್ರಭಾವದಿಂದ ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಇದೆ.

Last Updated : Jul 22, 2019, 03:44 PM IST
ಕೇರಳದಲ್ಲಿ ಭಾರೀ ಮಳೆ: ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ! title=
File Image

ತಿರುವನಂತಪುರಂ: ನೈರುತ್ಯ ಮಾನ್ಸೂನ್ ಪ್ರಭಾವದಿಂದ ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ  ಕಣ್ಣೂರು, ಕಾಸರ್‌ಗೋಡ್ ಮತ್ತು ಕೊಟ್ಟಾಯಂನ ಕೆಲವು ಭಾಗಗಳಲ್ಲಿನ ಶಾಲಾ ಮತ್ತು ಕಾಲೇಜುಗಳಿಗೆ ಸೋಮವಾರ ರಜಾ ಘೋಷಿಸಲಾಗಿದೆ. 

ಇದಕ್ಕೂ ಮೊದಲು ಹೆಚ್ಚಿನ ಮಳೆಯಿಂದಾಗಿ, ನಾಲ್ಕು ಅಣೆಕಟ್ಟುಗಳ ಬಾಗಿಲುಗಳನ್ನು ತೆರೆಯಲಾಗಿದ್ದು, ರಾಜ್ಯ ಸರ್ಕಾರವು ರಾಜ್ಯದಾದ್ಯಂತ ಹಲವಾರು ಪರಿಹಾರ ಶಿಬಿರಗಳನ್ನು ಸ್ಥಾಪಿಸಿದೆ.

ಸತತ ಮಳೆಯಿಂದಾಗಿ ಅಣೆಕಟ್ಟೆಗಳಲ್ಲಿ ಗರಿಷ್ಟ ಸಾಮರ್ಥ್ಯಕ್ಕಿಂತ ಹೆಚ್ಚು ನೀರು ಸಂಗ್ರಹವಾಗುವ ಭೀತಿಯಿಂದ ಇಡುಕ್ಕಿಯಲ್ಲಿರುವ ಮಲಂಕರ ಅಣೆಕಟ್ಟಿನ ಎರಡು ಕವಾಟುಗಳು ಮತ್ತು ಎರ್ನಾಕುಲಂ ಜಿಲ್ಲೆಯ ಭೂತಾಂಕೆಟ್ಟೆಯ ಒಂಬತ್ತು ಕವಾಟುಗಳು ಮತ್ತು ಕಲ್ಲರಕುಟ್ಟಿ ಮತ್ತು ಪಂಬಾ ಅಣೆಕಟ್ಟುಗಳ ತಲಾ ಒಂದು ಶಟರ್ ಅನ್ನು  ಜುಲೈ 19 ಬೆಳಿಗ್ಗೆ ತೆರೆಯಲಾಯಿತು.

ಭಾರತದ ಹವಾಮಾನ ಇಲಾಖೆ (ಐಎಂಡಿ) ಬುಲೆಟಿನ್ ನಲ್ಲಿ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚಿಸಿತ್ತು.

ಕರಾವಳಿ ಪ್ರದೇಶಗಳಲ್ಲಿ ವಾಸಿಸುವ ಹಲವಾರು ಕುಟುಂಬಗಳನ್ನು ಪೀಡಿತ ಪ್ರದೇಶಗಳಿಂದ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Trending News