ಬೆಂಗಳೂರು: ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ ಪ್ರತ್ಯೇಕ ಪ್ರದೇಶಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ.


COMMERCIAL BREAK
SCROLL TO CONTINUE READING

ಪುದುಚೇರಿ ಮತ್ತು ಕಾರೈಕಲ್ ನಲ್ಲಿಯೂ ಇಡೀ ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ಸಂಸ್ಥೆ  ಊಹಿಸಿದೆ.


ಇದಲ್ಲದೆ ಛತ್ತೀಸ್‌ಗಢ, ಒಡಿಶಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ ಮತ್ತು ಮಿಜೋರಾಂ ಪ್ರದೇಶಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ.


ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಮೋಡ ಕವಿದ ವಾತಾವರಣವಿರಲಿದೆ ಎಂದು ಐಎಂಡಿ ತಿಳಿಸಿದೆ.