ತಿರುವನಂತಪುರಂ: ಭಾರೀ ಮಳೆ(Kerala Rains)ಯಿಂದಾಗಿ ಭೂಕುಸಿತ ಉಂಟಾಗಿ ಕೇರಳದ ಕೊಟ್ಟಾಯಂ ಜಿಲ್ಲೆಯ ಮುಂಡಕಾಯಂನಲ್ಲಿರುವ ಮನೆ(Mundakayam House Collapses) ಯೊಂದು ಕೊಚ್ಚಿ ಹೋಗಿದೆ. ನೋಡ ನೋಡುತ್ತಿದ್ದಂತೆಯೇ ಕುಸಿದುಬಿದ್ದಿರುವ ಮನೆಯ ವಿಡಿಯೋವನ್ನು ANI ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. 14 ಸೆಕೆಂಡುಗಳ ಕ್ಲಿಪ್‌ನಲ್ಲಿ 2 ಅಂತಸ್ತಿನ ಮನೆ ನಿಧಾನವಾಗಿ ಕುಸಿದುಬಿದ್ದಿರುವುದನ್ನು ನೋಡಬಹುದು. ಅದು ಇದ್ದಕ್ಕಿದ್ದಂತೆಯೇ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗಿರುವುದನ್ನು ಕಾಣಬಹುದು. ಅದೃಷ್ಟವಶಾತ್ ಈ ಘಟನೆ ನಡೆದಾಗ ಮನೆ ಖಾಲಿಯಾಗಿತ್ತು ಎಂದು ವರದಿಗಳು ತಿಳಿಸಿವೆ.


COMMERCIAL BREAK
SCROLL TO CONTINUE READING

ಸದ್ಯ ಮನೆ ಕುಸಿದುಬಿದ್ದಿರುವ ಈ ವಿಡಿಯೋ ಸೋಷಿಯಲ್ ಮೀಡಿಯಾ(Social Media)ದಲ್ಲಿ ಸಖತ್ ವೈರಲ್ ಆಗಿದೆ. ಲಕ್ಷಾಂತರ ಜನರು ಈ ವಿಡಿಯೋವನ್ನು ವೀಕ್ಷಿಸಿದ್ದು, ಬೆಚ್ಚಿಬಿದ್ದಿದ್ದಾರೆ. ಈ ಮಧ್ಯೆ ದೇವರನಾಡು ಕೇರಳದಲ್ಲಿ ಮಳೆಯ ಅಬ್ಬರಕ್ಕೆ ಭೂಕುಸಿತ ಮತ್ತು ಪ್ರವಾಹ ಉಂಟಾಗಿ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನಿ ಮೋದಿ(Narendra Modi) ದಕ್ಷಿಣ ರಾಜ್ಯಕ್ಕೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: Gujrat Fire Accident: ಸೂರತ್ ನ ವಿವಾ ಪ್ಯಾಕೆಜಿಂಗ್ ಕಂಪನಿಯಲ್ಲಿ ಅಗ್ನಿ ಅವಘಡ, ಐದಂತಸ್ಥಿನ ಕಟ್ಟಡದಿಂದ ಕೆಳಕ್ಕೆ ಜಿಗಿದ ಜನ, ಇಲ್ಲಿದೆ VIDEO


Kottayam Flood) ಜಿಲ್ಲೆಯಲ್ಲಿ 13  ಮತ್ತು ಇಡುಕ್ಕಿಯಲ್ಲಿ 9 ಮೃತದೇಹಗಳನ್ನು ಪತ್ತೆಯಾಗಿದ್ದು, NDRF ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ. ಭಾರೀ ಮಳೆಯಿಂದಾಗಿ ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಮತ್ತು ಪ್ರವಾಹದಿಂದ ಅಪಾರ ಸಾವುನೋವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಇಡುಕ್ಕಿ ಜಿಲ್ಲೆಯಲ್ಲಿ ಪ್ರತಿಕೂಲ ಹವಾಮಾನದಿಂದ ಪ್ರಯಾಣ ನಿಷೇಧವಿದ್ದು, ಇಬ್ಬರು ವ್ಯಕ್ತಿಗಳು ನಾಪತ್ತೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಶೀಬಾ ಜಾರ್ಜ್ ಹೇಳಿದ್ದಾರೆ. ಪ್ರಧಾನಿ ಮೋದಿಯವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕರೆ ಮಾಡಿ ಮಳೆಯಿಂದ ಉಂಟಾದ ಪರಿಸ್ಥಿತಿ ಕುರಿತು ಚರ್ಚಿಸಿದರು. ‘ಕೇರಳ ಸಿಎಂ ಪಿಣರಾಯಿ ವಿಜಯನ್(Pinarayi Vijayan) ರೊಂದಿಗೆ ಮಾತನಾಡಿದ್ದೇನೆ. ಕೇರಳದಲ್ಲಿ ಭಾರೀ ಮಳೆ ಮತ್ತು ಭೂಕುಸಿತದ ಪರಿಸ್ಥಿತಿ ಬಗ್ಗೆ ಚರ್ಚಿಸಲಾಗಿದೆ. ಗಾಯಾಳುಗಳು ಮತ್ತು ಪ್ರವಾಹ ಪೀಡಿತರಿಗೆ ಸಹಾಯ ಮಾಡಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: Ration Card Rule Change: ಇನ್ಮುಂದೆ ಅನರ್ಹರು ಸರ್ಕಾರಿ ಪಡಿತರ ಅಂಗಡಿಗಳಿಂದ ಪಡಿತರ ಪಡೆಯಲು ಸಾಧ್ಯವಿಲ್ಲ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ