ಕುಸ್ತಿ ಫೆಡರೇಶನ್ ಅಧ್ಯಕ್ಷನನ್ನು ಬಂಧಿಸಲು ಕೇಂದ್ರ ಸರ್ಕಾರಕ್ಕೆ ಖಾಪ್ ನಾಯಕರ ಗಡುವು
ಕೆಲವು ಮಹಿಳಾ ಹಾಗೂ ಅಪ್ರಾಪ್ತ ಕುಸ್ತಿಪಟು ಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ (ಡಬ್ಲ್ಯುಎಫ್ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಲು ಖಾಪ್ ನಾಯಕರು ಜೂನ್ 9 ರ ಗಡುವನ್ನು ಶುಕ್ರವಾರ ನಿಗದಿಪಡಿಸಿದ್ದಾರೆ.
ನವದೆಹಲಿ: ಕೆಲವು ಮಹಿಳಾ ಹಾಗೂ ಅಪ್ರಾಪ್ತ ಕುಸ್ತಿಪಟು ಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ (ಡಬ್ಲ್ಯುಎಫ್ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಲು ಖಾಪ್ ನಾಯಕರು ಜೂನ್ 9 ರ ಗಡುವನ್ನು ಶುಕ್ರವಾರ ನಿಗದಿಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್, ಜೂನ್ 9 ರಂದು ಜಂತರ್ ಮಂತರ್ನಲ್ಲಿ ಕುಳಿತುಕೊಳ್ಳಲು ನಮಗೆ ಅವಕಾಶ ನೀಡದಿದ್ದರೆ, ಆಂದೋಲನ ಘೋಷಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ “ಕೇಂದ್ರ ಸರ್ಕಾರಕ್ಕೆ ಜೂನ್ 9 ರವರೆಗೆ ಸಮಯವಿದೆ.ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕಿಂತ ಕಡಿಮೆ ಯಾವುದಕ್ಕೂ ನಾವು ರಾಜಿ ಮಾಡಿಕೊಳ್ಳುವುದಿಲ್ಲ.ಇದು ಆಗದಿದ್ದರೆ, ಜೂನ್ 9 ರಂದು ಜಂತರ್ ಮಂತರ್ಗೆ ತೆರಳಿ ರಾಷ್ಟ್ರದಾದ್ಯಂತ ಪಂಚಾಯತಿ ನಡೆಸುತ್ತೇವೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ನಮ್ಮ ಸರ್ಕಾರ ಪೊಲೀಸ್ ಇಲಾಖೆಯನ್ನ ʼಕೇಸರಿಕರಣʼ ಮಾಡೋಕೆ ಬಿಡಲ್ಲ
ಕುಸ್ತಿಪಟುಗಳ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು ಡಬ್ಲ್ಯುಎಫ್ಐ ಮುಖ್ಯಸ್ಥರನ್ನು ಜೂನ್ 9 ರ ಮೊದಲು ಬಂಧಿಸಬೇಕು ಎಂದು ಖಾಪ್ ನಾಯಕರು ಒತ್ತಾಯಿಸಿದರು. ಕುಸ್ತಿಪಟುಗಳಿಗೆ ನ್ಯಾಯಕ್ಕಾಗಿ ಒತ್ತಾಯಿಸಿ, ಕುಸ್ತಿಪಟುಗಳ ಆಂದೋಲನದ ಕುರಿತು ಚರ್ಚಿಸಲು ಹರಿಯಾಣದ ಕುರುಕ್ಷೇತ್ರದಲ್ಲಿ ಖಾಪ್ ಮಹಾಪಂಚಾಯತ್ ನಡೆಸಲಾಯಿತು.
ವಿವಿಧ ಖಾಪ್ಗಳು ಮತ್ತು ರೈತ ಸಂಘಟನೆಗಳ ಪ್ರತಿನಿಧಿಗಳು ಹರಿಯಾಣ, ಪಂಜಾಬ್, ರಾಜಸ್ಥಾನ ಮತ್ತು ಉತ್ತರ ಪ್ರದೇಶ ಸೇರಿದಂತೆ ವಿವಿಧ ಸ್ಥಳಗಳಿಂದ ಜಾಟ್ ಧರ್ಮಶಾಲಾವನ್ನು ತಲುಪಿದರು. ನಿರ್ಗಮಿತ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅಪ್ರಾಪ್ತ ವಯಸ್ಕ ಸೇರಿದಂತೆ ಮಹಿಳಾ ಗ್ರಾಪ್ಲರ್ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕುಸ್ತಿಪಟುಗಳಿಗೆ ಬೆಂಬಲ ವ್ಯಕ್ತಪಡಿಸುವ ರೈತ ಸಂಘಟನೆಗಳು ಉತ್ತರ ಪ್ರದೇಶದಲ್ಲಿ ಖಾಪ್ ಮಹಾಪಂಚಾಯತ್ ಮತ್ತು ಪಂಜಾಬ್ ಮತ್ತು ಹರಿಯಾಣದಲ್ಲಿ ಗುರುವಾರ ಸರಣಿ ಪ್ರತಿಭಟನೆಗಳನ್ನು ನಡೆಸಿವೆ.
ಇದನ್ನೂ ಓದಿ: ಸಿದ್ದರಾಮಯ್ಯರೇ 5 ವರ್ಷ ಪೂರ್ಣಾವಧಿ ಸಿಎಂ, ಅಧಿಕಾರ ಹಂಚಿಕೆ ಇಲ್ಲ..!
ಮಧ್ಯಾಹ್ನ ಮಹಾಪಂಚಾಯತ್" ಪ್ರಾರಂಭವಾಗುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಬಿಕೆಯು ಮುಖಂಡ ರಾಕೇಶ್ ಟಿಕಾಯತ್, ಕುಸ್ತಿಪಟುಗಳು ದೇಶದ ಹೆಮ್ಮೆಯಾಗಿದ್ದು, ಅವರು ಈ ಪ್ರಕರಣದಲ್ಲಿ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ. "ದೇಶದ ಹೆಣ್ಣುಮಕ್ಕಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಕ್ರಮಕ್ಕಾಗಿ ಒತ್ತಾಯಿಸಲು ಮಹಾರಾಷ್ಟ್ರ ಮತ್ತು ರಾಜಸ್ಥಾನ ಸೇರಿದಂತೆ ಇತರ ರಾಜ್ಯಗಳಲ್ಲಿ ಅನೇಕ ಸಂಘಟನೆಗಳು ಮತ್ತು ಖಾಪ್ಗಳು ಸಭೆಗಳನ್ನು ನಡೆಸುತ್ತಿವೆ ಎಂದು ಟಿಕಾಯ್ತ್ ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
.