ಬೆಂಗಳೂರು: ದಕ್ಷಿಣ ರಾಜ್ಯವಾದ ಕರ್ನಾಟಕದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವು ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿದ್ದು, 2019 ರ ಏಪ್ರಿಲ್ 18 ರಂದು ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ.


COMMERCIAL BREAK
SCROLL TO CONTINUE READING

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವು ಕೆ.ಆರ್.ಪುರಂ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರಂ, ಹೆಬ್ಬಾಳ್ ಮತ್ತು ಪುಲಕೇಶಿನಗರ ಸೇರಿದಂತೆ ಎಂಟು ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ಉತ್ತರ ಕ್ಷೇತ್ರವೂ ಒಂದು. ಬೆಂಗಳೂರು ಉತ್ತರ ಅತೀ ಹೆಚ್ಚು ಮತದಾರರನ್ನು ಹೊಂದಿದ್ದು 22,24, 847 ಮತದಾರರಿದ್ದಾರೆ. ಇವರಲ್ಲಿ 11,66,811 ಪುರುಷರು ಹಾಗೂ 10,61,746 ಮಹಿಳೆಯರು, 291 ಇತರರು ಇದ್ದಾರೆ.


2014 ರ ಲೋಕಸಭಾ ಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಡಿ.ವಿ.ಸದಾನಂದ ಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಿ.ನಾರಾಯಣಸ್ವಾಮಿ ವಿರುದ್ಧ 2.29 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಸದಾನಂದಗೌಡ ಅವರು 7,18,326  ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ನಾರಾಯಣಸ್ವಾಮಿ ಅವರು 4,88,562 ಮತಗಳನ್ನು ಪಡೆದು ಪರಾಭವಗೊಂಡಿದ್ದರು. ಅಂದು ನಡೆದ ಲೋಕಸಭಾ ಚುನಾವಣೆಯಲ್ಲಿ 2363 ಮತದಾನ ಕೇಂದ್ರಗಳಲ್ಲಿ 53.63 ರಷ್ಟು ಮತದಾರರು ಮತ ಚಲಾಯಿಸಿದ್ದರು. 


2009 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಡಿ.ಬಿ.ಚಂದ್ರೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿ ಸಿ. ಕೆ. ಜಾಫರ್ ಶರೀಫ್ ವಿರುದ್ಧ  59 ಸಾವಿರ ಮತಗಳ ಅಂತರದಿಂದ ಜಯ ಸಾಧಿಸಿದ್ದರು. ಚಂದ್ರೇಗೌಡ ಅವರು 4, 52, 920 ಮತಗಳನ್ನು ಪಡೆದರೆ, ಶರೀಫ್ 3,93,255 ಮತಗಳನ್ನು ಪಡೆದು ಪರಾಭವಗೊಂಡಿದ್ದರು.