ತೈಲ ದರದಲ್ಲಿ ಮತ್ತೆ ಏರಿಕೆ; ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು ಗೊತ್ತೇ?
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರುತ್ತಿರುವ ಕಚ್ಚಾ ತೈಲದ ಬೆಲೆಯಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಏರಿಕೆಯಾಗಿದೆ.
ನವದೆಹಲಿ: ಪೆಟ್ರೋಲ್ ದರದಲ್ಲಿ ಮತ್ತೆ ಏರಿಕೆ ಕಂಡಿದ್ದು, ಶನಿವಾರ ದೆಹಲಿಯಲ್ಲಿ ಪ್ರತಿ ಲೀಟರ್'ಗೆ 70.72 ರೂ. ಮತ್ತು ಮುಂಬೈನಲ್ಲಿ ಪ್ರತಿ ಲೀಟರ್ಗೆ 76.18 ರೂ. ನಿಗದಿಯಾಗಿದೆ. ದೆಹಲಿಯಲ್ಲಿ ಡೀಸೆಲ್ 65.16 ರೂ. ಮತ್ತು ಮುಂಬೈನಲ್ಲಿ ಲೀಟರ್ಗೆ 68.02 ರೂ. ನಿಗದಿ ಮಾಡಿ ದರ ಪರಿಷ್ಕರಿಸಲಾಗಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರುತ್ತಿರುವ ಕಚ್ಚಾ ತೈಲದ ಬೆಲೆಯಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆಯಾಗಿದೆ.
ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 70.72 | 65.16 |
ಕೋಲ್ಕತ್ತಾ | 72.82 | 66.93 |
ಮುಂಬೈ | 76.35 | 68.22 |
ಚೆನ್ನೈ | 73.41 | 68.83 |
ಬೆಂಗಳೂರು | 73.05 | 67.30 |
ಹೈದರಾಬಾದ್ | 75.03 | 70.84 |
ತಿರುವನಂತಪುರಂ | 74.04 | 70.13 |