ನವದೆಹಲಿ: ಲಾಲು ಪ್ರಸಾದ್ ಯಾದವ್ ಅವರು 11 ನೇ ಬಾರಿಗೆ ಮಂಗಳವಾರ (ಡಿಸೆಂಬರ್ 3) ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಮುಖ್ಯಸ್ಥರಾಗಿ ಅವಿರೋಧವಾಗಿ ಆಯ್ಕೆಯಾದರು. ಬಹು ಕೋಟಿ ಮೇವು ಹಗರಣ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಅವರನ್ನು ಡಿಸೆಂಬರ್ 23, 2017 ರಂದು ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು.


COMMERCIAL BREAK
SCROLL TO CONTINUE READING

ಆದಾಗ್ಯೂ, ಲಾಲು ಪ್ರಸಾದ್ ನೇತೃತ್ವದಲ್ಲಿ ಬಿಹಾರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಪಕ್ಷ ನಿರ್ಧರಿಸಿದೆ ಎಂದು ಆರ್‌ಜೆಡಿ ನಾಯಕ ತೇಜಶ್ವಿ ಯಾದವ್ ಹೇಳಿದ್ದಾರೆ. 


ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತೇಜಶ್ವಿ, 'ಆರ್‌ಜೆಡಿ ಮತ್ತು ಲಾಲು ಪ್ರಸಾದ್ ಜಿ ಅವರ ಭಯದಿಂದಾಗಿ ಎನ್‌ಡಿಎ ಜನರು ಒಟ್ಟಾಗಿರುವುದು. ನಾಮನಿರ್ದೇಶನ ಪ್ರಕ್ರಿಯೆ ಪೂರ್ಣಗೊಂಡ ನಂತರ ಲಾಲು ಪ್ರಸಾದ್ ಜಿ ಮತ್ತೆ ಮುಖ್ಯಸ್ಥರ ಆಗುತ್ತಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು. ಲಾಲು ಜಿ ಅವರ ನಾಯಕತ್ವದಲ್ಲಿ ನಾವು 2020 ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.


ಲಾಲು ಪ್ರಸಾದ್ ಯಾದವ್ ಆಗಸ್ಟ್ 2018 ರಿಂದ ರಾಂಚಿಯ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೇವು ಹಗರಣ ಪ್ರಕರಣದಲ್ಲಿ ಅವರಿಗೆ ಕಳೆದ ವರ್ಷ ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಏಳು ವರ್ಷ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಏಳು ವರ್ಷ ಜೈಲು ಶಿಕ್ಷೆ ವಿಧಿಸಲಾಯಿತು.


ಈ ಪ್ರಕರಣದಲ್ಲಿ ಲಾಲೂಗೆ 60 ಲಕ್ಷ ರೂ.ಗಳ ದಂಡ ವಿಧಿಸಲಾಯಿತು. ಲಾಲು ಅವಿಭಜಿತ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ 1991 ಮತ್ತು 1996 ರ ನಡುವೆ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಡುಮ್ಕಾ ಖಜಾನೆಯಿಂದ 3.5 ಕೋಟಿ ರೂ.ಗಳನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು.