ಇಟಾನಗರ: ಅರುಣಾಚಲ ಪ್ರದೇಶದಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಬುಧವಾರ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಗಾಯಗೊಂಡಿದ್ದು, ಓರ್ವ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ರಾಷ್ಟ್ರೀಯ ಹೆದ್ದಾರಿ 415 ರಲ್ಲಿ ರಸ್ತೆ ಸಂಚಾರ ನಿಷೇಧಿಸಲಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯಾ ತಂಡಗಳು ಈ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. 


ಭೂಕುಸಿತದಿಂದಾಗಿ ಹಲವು ವಾಹನಗಳು ಜಖಂ ಆಗಿದ್ದು, ಈ ಪ್ರದೇಶದಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದಾಗಿ ಮುಂದಿನ ದಿನಗಳಲ್ಲಿ ಭೂಕುಸಿತದಂತಹ ಘಟನೆಗಳು ಹೆಚ್ಚಾಗಲಿವೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ. 


ವರದಿಗಳ ಪ್ರಕಾರ, ಅರುಣಾಚಲ ಪ್ರದೇಶದಲ್ಲಿ ಮಳೆಯಿಂದಾಗಿ ಗೋಡೆ ಕುಸಿದ ಪರಿಣಾಮ ಸುಮಾರು 7 ಮನೆಗಳು ಹಾನಿಗೊಳಗಾಗಿದ್ದವು. ಅಲ್ಲದೆ, ವಿವೇಕ್ ವಿಹಾರ್‌ನ ಡಿಎನ್‌ಜಿಸಿ ಬಳಿ ಮತ್ತೊಂದು ಮನೆ ಮತ್ತು ಲೋವರ್ ರಾಕಾಪ್ ಕಾಲೋನಿ ಬಳಿ ಎರಡು ಮನೆಗಳು ಹಾನಿಗೀಡಾಗಿವೆ.