ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ, ಐಸಿಯುನಲ್ಲಿ ನಿಗಾದಲ್ಲಿದ್ದಾರೆ: ವೈದ್ಯರು

Lata Mangeshkar: ಈ ವರ್ಷದ ಜನವರಿಯಲ್ಲಿ ಕೋವಿಡ್ ಪಾಸಿಟಿವ್ ಪರೀಕ್ಷೆಯ ನಂತರ ಲತಾ ಮಂಗೇಶ್ಕರ್ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  

Edited by - Zee Kannada News Desk | Last Updated : Feb 5, 2022, 03:43 PM IST
  • ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ
  • ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದು, ನಿಗಾವಹಿಸಲಾಗಿದೆ
  • ಲತಾ ಮಂಗೇಶ್ಕರ್ ಅವರಿಗೆ ನ್ಯುಮೋನಿಯಾ ಇರುವುದು ಪತ್ತೆಯಾಯಿತು
ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ, ಐಸಿಯುನಲ್ಲಿ ನಿಗಾದಲ್ಲಿದ್ದಾರೆ: ವೈದ್ಯರು   title=
ಲತಾ ಮಂಗೇಶ್ಕರ್

ನವದೆಹಲಿ: ಭಾರತದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (Lata Mangeshkar) ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ ಎಂದು ಅವರ ವೈದ್ಯರು ತಿಳಿಸಿದ್ದಾರೆ. ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದು, ನಿಗಾವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಶಿಕ್ಷಣ ವ್ಯವಸ್ಥೆಯಲ್ಲಿ ಮತೀಯವಾದ ತುರುಕಲು ಸಿದ್ದರಾಮಯ್ಯ ಪ್ರಯತ್ನ: ಬಿಜೆಪಿ ಆರೋಪ

ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಡಾ.ಪ್ರತೀತ್ ಸಂಧಾನಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ. ಅವರು ಗಂಭೀರರಾಗಿದ್ದಾರೆ. ಅವರನ್ನು ವೆಂಟಿಲೇಟರ್‌ನಲ್ಲಿ (Ventilator) ಇರಿಸಲಾಗಿದ್ದು, ವೈದ್ಯರು ನಿಗಾವಹಿಸಿದ್ದಾರೆ. 

ಈ ವರ್ಷದ ಜನವರಿಯಲ್ಲಿ ಕೋವಿಡ್ ಪಾಸಿಟಿವ್ (Corona) ಪರೀಕ್ಷೆಯ ನಂತರ ಲತಾ ಮಂಗೇಶ್ಕರ್ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 92 ವರ್ಷದ ಲತಾ ಮಂಗೇಶ್ಕರ್ ಅವರಿಗೆ ಕೋವಿಡ್-19 ನಂತರ ನ್ಯುಮೋನಿಯಾ ಇರುವುದು ಪತ್ತೆಯಾಯಿತು.

ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು 1942 ರಲ್ಲಿ 13 ನೇ ವಯಸ್ಸಿನಲ್ಲಿ ತಮ್ಮ ಸುಪ್ರಸಿದ್ಧ ಗಾಯನ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು ಹಲವಾರು ಭಾರತೀಯ ಭಾಷೆಗಳಲ್ಲಿ 30,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.

ಇದನ್ನೂ ಓದಿ: ಈರುಳ್ಳಿ ಸಿಪ್ಪೆ ಕಸದ ಬುಟ್ಟಿಗೆ ಹಾಕುವ ಮುನ್ನ ಈ ಸುದ್ದಿ ಓದಿ.. ಹಲವಾರು ರೋಗಗಳಿಗೆ ಇದು ರಾಮಬಾಣ

ಪದ್ಮಭೂಷಣ, ಪದ್ಮವಿಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಬಹು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ಮತ್ತು ಗೌರವಗಳನ್ನು ಪಡೆದಿದ್ದಾರೆ. ಅವರು ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು (Bharat Ratna) ಸಹ ಪಡೆದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News