ಲತಾ ಮಂಗೇಶ್ಕರ್ ಆರೋಗ್ಯ ಸ್ಥಿರ, ಐಸಿಯುನಲ್ಲಿಯೇ ಚಿಕಿತ್ಸೆ- ಆಸ್ಪತ್ರೆ ಮೂಲಗಳು
ಕಳೆದ ವಾರ ಉಸಿರಾಟದ ತೊಂದರೆಯಿಂದಾಗಿ ಮುಂಬೈನಲ್ಲಿರುವ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾದ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿರವಾಗಿದ್ದರೂ ಇನ್ನು ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆಯ ಮೂಲಗಳು ಮಂಗಳವಾರ ತಿಳಿಸಿವೆ.

ನವದೆಹಲಿ: ಕಳೆದ ವಾರ ಉಸಿರಾಟದ ತೊಂದರೆಯಿಂದಾಗಿ ಮುಂಬೈನಲ್ಲಿರುವ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾದ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿರವಾಗಿದ್ದರೂ ಇನ್ನು ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆಯ ಮೂಲಗಳು ಮಂಗಳವಾರ ತಿಳಿಸಿವೆ.
"ಅವರು ಸ್ಥಿರವಾಗಿದ್ದಾರೆ, ಆದರೆ ಇನ್ನೂ ಐಸಿಯುನಲ್ಲಿದ್ದಾರೆ. ಸುಧಾರಣೆಯ ಲಕ್ಷಣಗಳನ್ನು ತೋರಿಸುತ್ತಿದ್ದಾರೆ. ನಾವು ಕುಟುಂಬದ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ನಿಮ್ಮನ್ನು ವಿನಂತಿಸುತ್ತೇವೆ' ಎಂದು ಆಸ್ಪತ್ರೆಯ ಮೂಲಗಳ ಹೇಳಿಕೆ ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಇನ್ನೊಂದೆಡೆಗೆ ಅವರ ಸೋದರ ಸೊಸೆ ರಚನಾ ಶಾ ಮಾತನಾಡಿ ' ದೀದಿ ಸ್ಥಿರವಾಗಿ ಸುಧಾರಿಸಿಕೊಳ್ಳುತ್ತಿದ್ದಾರೆ. ದೇವರು ಕರುಣಾಮಯಿ. ಪ್ರಾರ್ಥನೆಗಳು ಮತ್ತು ಹಿತೈಷಿಗಳು ದೇವತೆಗಳಂತೆ ಇದ್ದಾರೆ' ಎಂದು ಶಾ ಪಿಟಿಐಗೆ ತಿಳಿಸಿದ್ದಾರೆ.
ಲತಾ ಮಂಗೇಶ್ಕರ್ ಅವರು ತಮ್ಮ ಏಳು ದಶಕಗಳ ವೃತ್ತಿಜೀವನದಲ್ಲಿ 30,000 ಕ್ಕೂ ಹೆಚ್ಚು ಹಾಡುಗಳನ್ನು ಭಾರತದ ವಿವಿಧ ಭಾಷೆಗಳಲ್ಲಿ ಹಾಡಿದ್ದಾರೆ. ಚಲನಚಿತ್ರ ಹಾಗೂ ಕಲಾ ರಂಗಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರಿಗೆ 2001 ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ್ ರತ್ನ ಪ್ರಶಸ್ತಿಯನ್ನು ನೀಡಲಾಯಿತು.